ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಬಂಧನ

Date:

Advertisements

ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ ಬಳಿ ಬುಧವಾರ ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯ(50) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಕೊಕ್ಕಡ ಎಂಬಲ್ಲಿ ದಸ್ತಗಿರಿ ಮಾಡಿದ್ದು, ಗುರುವಾರ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಬೆಳ್ತಂಗಡಿ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾಹಿತಿ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಹಲವು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಲಾಗಿತ್ತು. ಈ ಘಟನೆಯ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 189(2), 191(2), 115(2), 324(5),352,307 ಜತೆಗೆ 190 ಬಿಎನ್‌ಎಸ್‌ ಕಾಯ್ದೆಯ ಅಡಿಯಲ್ಲಿ ಸುಮಾರು 15 ರಿಂದ 40ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X