ಧರ್ಮಸ್ಥಳ | ಸಾಕ್ಷಿ ದೂರುದಾರನ ಮಾಹಿತಿ ಆಧರಿಸಿ ಬಾಹುಬಲಿ ಬೆಟ್ಟದ ಬಳಿ ಶೋಧಕ್ಕೆ ಮುಂದಾದ ಎಸ್‌ಐಟಿ

Date:

Advertisements

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತು ಹಾಕಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9 ರಂದು ಎಸ್‌ಐಟಿ ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಮುಖ್ಯ ದ್ವಾರದ ಸಮೀಪದ ಬಾಹುಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ. ಸಕಲ ಸಿದ್ಧತೆಯೊಂದಿಗೆ ಆಗಮಿಸಿರುವ ಎಸ್.ಐ.ಟಿ. ತಂಡ, ಎಸಿ, ತಹಶೀಲ್ದಾರ್, ಅರಣ್ಯ ಸಹಿತ ಎಲ್ಲ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.

ಶುಕ್ರವಾರ ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ 16 ಮತ್ತು 16A ಎರಡು ಸ್ಥಳದಲ್ಲಿ ಶೋಧ ನಡೆಸಿತ್ತು. ಜತೆಗೆ ಇನ್ನೆರಡು ಸ್ಥಳ ಅಗೆದಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಧಿಕೃತವಾಗಿ ಎಲ್ಲೂ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿಲ್ಲ.

Advertisements
WhatsApp Image 2025 08 09 at 1.11.15 PM

ಇದೀಗ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಶನಿವಾರ ಕರೆತಂದಿದ್ದಾರೆ. ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕಾದು ನೋಡಬೇಕಿದೆ. 13ನೇ ಸ್ಥಳದ ಮಹಜರು ಪ್ರಕ್ರಿಯೆ ನಡೆಸಲಾಗಿದೆಯಾದರೂ, ಇನ್ನೂ ಕೂಡ ಆ ಸ್ಥಳದಲ್ಲಿ ಇನ್ನೂ ಉತ್ಖನನ ಕಾರ್ಯಾಚರಣೆ ಕೈಗೊಂಡಿಲ್ಲ. ಇದೀಗ ಹೊಸ ಸ್ಥಳದಲ್ಲಿ ಮಹಜರು ಪ್ರಕ್ರಿಯೆಗೆ ಎಸ್‌ಐಟಿ ಅಧಿಕಾರಿಗಳು ಆಗಮಿಸಿದ್ದಾರೆ.

ಇದನ್ನು ಓದಿದ್ದೀರಾ? ಮತಗಳ್ಳತನ | ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಅನಾಮಿಕ ಬೆಳಗ್ಗೆ 10.15 ಗಂಟೆ ಸುಮಾರಿಗೆ ಪೊಲೀಸ್ ಬಂದೋಬಸ್ತ್‌ ನಲ್ಲಿ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದು, ಅಲ್ಲಿಂದ 12.05 ಗಂಟೆಗೆ ಬೆಳ್ತಂಗಡಿಯಿಂದ ಹೊರಟು 12.45 ಸುಮಾರಿಗೆ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿದ್ದಾನೆ.

WhatsApp Image 2025 08 09 at 1.21.41 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X