ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಜಾಗ ತೋರಿಸಿದ ದೂರುದಾರ; ಕಳೇಬರ ಹೊರತೆಗೆಯುತ್ತಿರುವ ತಂಡ

Date:

Advertisements

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ದೂರುದಾರ ಹೇಳಿರುವಂತೆ ಮೃತದೇಹಗಳನ್ನು ಹೂತಿಟ್ಟ ಜಾಗಗಳ ಮಹಜರು ಕಾರ್ಯಾಚರಣೆ ನಡೆಯುತ್ತಿದೆ. ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು, ಇಂದು, ಮೃಹದೇಹಗಳ ಕಳೇಬರಗಳನ್ನು ಹೊರತೆಗೆಯಲು 12 ಜನರ ತಂಡವು ಆ ಜಾಗಗಳಲ್ಲಿ ಅಗೆಯುವ ಕೆಲಸದಲ್ಲಿ ನಿರತವಾಗಿದೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X