ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಉತ್ಖನನ: ಜಿಪಿಎಸ್‌ ಯಂತ್ರ ಬಳಸಲು ಮುಂದಾದ ಎಸ್‌ಐಟಿ

Date:

Advertisements

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ.

ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ ಎಸ್‌ಐಟಿ ಅಧಿಕಾರಿಗಳು ಜಿಪಿಎಸ್ ಡ್ರೋನ್ ಯಂತ್ರ ಬಳಸಲು ಮುಂದಾಗಿದ್ದಾರೆ.

ಈ ಬಗ್ಗೆ ಸ್ಥಳದಿಂದ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿರುವ ನಮ್ಮ ಪ್ರತಿನಿಧಿ ಭೀಮಾ ನಾಯ್ಕ್‌, “ಸಾಕ್ಷಿ ದೂರುದಾರ ಗುರುತಿಸಿದ್ದ ಈವರೆಗಿನ ಯಾವುದೇ ಸ್ಥಳದಲ್ಲಿ ಜಿಪಿಎಸ್ ತಂತ್ರಜ್ಞಾನವನ್ನು ಎಸ್‌ಐಟಿ ಬಳಸಿಲ್ಲ. ಸೋಮವಾರ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಬರುವಾಗ ಜಿಪಿಎಸ್ ಯಂತ್ರವನ್ನು ತಂದಿದ್ದಾರೆ. ಅದರ ಫಲಿತಾಂಶದ ಆಧಾರದ ಮೇಲೆ ಉತ್ಖನನ ನಡೆಸುವುದಕ್ಕೆ ಮುಂದಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಹಲವಾರು ವಿದ್ಯುತ್ ಕಂಬಗಳ ಸಹಿತ ಹಲವು ಅಡಚಣೆಗಳಿರುವುದರಿಂದ ಎಸ್‌ಐಟಿ ಅಧಿಕಾರಿಗಳು ಜಿಪಿಎಸ್ ಯಂತ್ರ ಬಳಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಜಿಪಿಎಸ್ ತಂತ್ರಜ್ಞಾನದ ಬಳಕೆ ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ಧನ ಪೂಜಾರಿ ಹೇಳಿಕೆ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 10ರಂದು ಯಾವುದೇ ಕಾರ್ಯಾಚರಣೆ ನಡೆದಿರಲಿಲ್ಲ. ಆ. 9ರಂದು ಧರ್ಮಸ್ಥಳದ ಬಾಹುಬಲಿ ಬೆಟ್ಟದ ಸಮೀಪ ಶೋಧ ನಡೆದಿತ್ತು. ಬಾಹುಬಲಿ ಅರಣ್ಯದಲ್ಲಿ 16 ಮತ್ತು 16-ಅ ಗುರುತು ಮಾಡಿದ ಎರಡು ಜಾಗದಲ್ಲಿ ಕಾರ್ಯಾಚರಣೆ ನಡೆದಿತ್ತು. ಆದರೆ, ಈ ವೇಳೆ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X