ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತಿಯಿಂದ ಮಾಹಿತಿ ಸಂಗ್ರಹಿಸಿದ ಎನ್‌ಹೆಚ್‌ಆರ್‌ಸಿ ತಂಡ

Date:

Advertisements

ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ತನಿಖೆ ನಡೆಯುತ್ತಿರುವಾಗಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿ ಮಾಹಿತಿಗಳನ್ನು ಪಡೆದಿದೆ.

ಎನ್‌ಎಚ್‌ಆರ್‌ಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಎಸ್‌ಪಿ ಯುವರಾಜ್, ಡಿವೈಎಸ್‌ಪಿ ರವಿ ಸಿಂಗ್ ಸೇರಿದಂತೆ ಇತರರನ್ನು ಒಳಗೊಂಡ ಎನ್‌ಎಚ್‌ಆರ್‌ಸಿ ತಂಡವು ಆಗಮಿಸಿದೆ. ಈ ತಂಡವು ಆರಂಭದಲ್ಲಿ ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ದೂರುದಾರನ‌ ಜತೆಗೆ ಮಾತುಕತೆ ನಡೆಸಿ ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ದೂರುದಾರ ತೋರಿಸಿ ಅಗೆಯಲಾಗಿರುವ ಧರ್ಮಸ್ಥಳದ ಬಾಹುಬಲಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

Advertisements

ಮಾನವ ಹಕ್ಕುಗಳ ಆಯೋಗದ ಸದಸ್ಯರ ಈ ತಂಡ ಇನ್ನೂ 3, 4 ದಿನಗಳ ಕಾಲ ಇಲ್ಲಿಯೇ ಇದ್ದು ಮಾಹಿತಿ ಸಂಗ್ರಹಿಸುವುದಾಗಿ ಅಧಿಕಾರಿಗಳ‌ ಮೂಲಗಳಿಂದ ಮಾಹಿತಿ‌ ದೊರೆತಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಾಮಾಜಿಕ ಕಾರ್ಯಕರ್ತರಿಗೆ ಮಾಧ್ಯಮದ ನಿರಂತರ ಸಂಪರ್ಕವಿರಬೇಕು : ಸೈಯದ್ ಯೂಸುಫ್ ಉಲ್ಲಾ

ದಿನವಿಡೀ ಧರ್ಮಸ್ಥಳ ಗ್ರಾಮದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗ್ರಾಮ ಪಂಚಾಯಿತಿಯಲ್ಲಿ ಪಿಡಿಒಗಳಿಂದ ಕೆಲವು ‌ಮಾಹಿತಿ‌ ಪಡೆದು ಪಂಚಾಯಿತಿಯಲ್ಲಿ‌ ಕೆಲಸ‌ ಮಾಡಿದ ಕೆಲಸಗಾರರ‌ ಮನೆಗಳಿಗೆ ‌ಭೇಟಿ ನೀಡಿ ಅವರಿಂದ‌ ಹಲವು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಮಾನವ ಹಕ್ಕುಗಳ ಆಯೋಗವು ಸುಮೊಟೊ ಕೇಸ್ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ. ಈ ಪ್ರಕರಣದಲ್ಲಿ ಎಲ್ಲ ರೀತಿಯಲ್ಲಿ ನಾವು ತನಿಖೆ‌ ಮಾಡಲಿದ್ದೇವೆ ಎಂದು ಅಧಿಕಾರಿಗಳ ಮೂಲಗಳಿಂದ ಮಾಹಿತಿ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X