ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ ತಂಡವು ದೂರುದಾರನೊಂದಿಗೆ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರುದಾರ ತೋರಿಸಿದ ಜಾಗದಲ್ಲಿ ಅಧಿಕಾರಿಗಳ ತಂಡ ಉತ್ಖನನ ಪ್ರಕ್ರಿಯೆ ನಡೆಸಿತು.
ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ
ಇದೀಗ ಹೊಸ ಸ್ಥಳವನ್ನು ಸಾಕ್ಷಿದಾರ ಕರೆತಂದಿದ್ದು ಎಷ್ಟು ಸ್ಥಳಗಳ ಗುರುತು ಮಾಡಬಹುದು ಎಂಬುದು ಖಚಿತವಾಗಿಲ್ಲ.
ಈಗಾಗಲೇ ನೇತ್ರಾವತಿ ಸ್ನಾನಘಟ್ಟದಲ್ಲಿ ಒಂದು ಹಂತದ ಕಾರ್ಯಾಚರಣೆ ಮುಗಿಸಿದ ಎಸ್‌ಐಟಿ ಎರಡನೇ ಹಂತದ ಕಾರ್ಯಾಚರಣೆಗೆ ಮುಂದಾಗಿದೆ. ಮೊದಲ ಹಂತದಲ್ಲಿ ಎರಡು ಸ್ಥಳಗಳಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು. ಇದೀಗ ಬೊಳಿಯಾರು ಪ್ರದೇಶದಲ್ಲಿ ಸ್ಥಳ ಗುರುತಿಸುವ ಕಾರ್ಯ ಆರಂಭವಾಗಿದೆ. ಆದರೆ ನೇತ್ರಾವತಿ ಸ್ನಾನಘಟ್ಟದಲ್ಲಿರುವ ವಿವಾದಿತ 13ನೇ ಸ್ಥಳವನ್ನು ಇನ್ನೂ ಅಗೆದಿಲ್ಲ.
