ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ನಾನೇ ಹೂತು ಹಾಕಿದ್ದೇನೆ. ಪಾಪ ಪ್ರಜ್ಞೆ ಕಾಡುತ್ತಿದೆ. ಆ ಮೃತದೇಹಗಳನ್ನು ಹೊರತೆಗೆಯುತ್ತೇನೆ ತನಿಖೆ ನಡೆಸಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬೆನ್ನಲ್ಲೇ, ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಧರ್ಮಸ್ಥಳದಲ್ಲಿ ನಡೆದಿದ್ದ ಕೊಲೆ-ಅತ್ಯಾಚಾರಗಳ ಬಗ್ಗೆ ವಿಡಿಯೋ ಮಾಡಿ, ಅಪ್‌ಲೋಡ್ ಮಾಡಿದ್ದರು. ಇದೀಗ, ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸರು ಸುವೋ ಮೋಟೋ ಪ್ರಕರಣ ದಾಖಲಿಸಿದ್ದಾರೆ.
ಸಮೀರ್ ಅವರ ವಿಡಿಯೋ ಸಾರ್ವಜನಿಕರ ಪ್ರಚೋದನೆ ನೀಡುವಂತಿದೆ ಮತ್ತು ಕೆಲವು ಸುಳ್ಳು ಮಾಹಿತಿಗಳನ್ನು ಒಳಗೊಂಡಿದೆ ಎಂದು ಪೊಲೀಸರು ಆರೋಪಿಸಿದ್ದು, ಸಮೀರ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 192,240,353(1)(b) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವುದಾಗಿ ಹೇಳಿಕೊಂಡಿರುವ ಸಾಕ್ಷಿ-ದೂರುದಾರರು ತಮ್ಮ ದೂರು ಮತ್ತು ನ್ಯಾಯಾಲಯದ ಎದುರು ಬಹಿರಂಗಪಡಿಸಿದ ಮಾಹಿತಿಗಳನ್ನು ಹೊರತುಪಡಿಸಿ, ಹಲವಾರು ಮಾಹಿತಿಗಳನ್ನು ಕಾಲ್ಪನಿಕ ಮತ್ತು ಎ.ಐ ಮೂಲಕ ಸೃಷ್ಟಿಸಿ ಸಮೀರ್ ವಿಡಿಯೋ ಮಾಡಿದ್ದಾರೆ ಎಂದೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.