ಧರ್ಮಸ್ಥಳ ಪ್ರಕರಣ | ಮೂಳೆ ಪತ್ತೆಯ ಬಳಿಕ ತಾತ್ಕಾಲಿಕ ಶೆಡ್‌ ನಿರ್ಮಾಣ; ಉತ್ಖನನ ಮುಂದುವರಿಸಿದ ಎಸ್‌ಐಟಿ

Date:

Advertisements

ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಮೂರನೇ ದಿನದ ಉತ್ಖನನದ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ ಮೂಳೆಗಳು ಸಿಕ್ಕಿರುವುದು ಖಚಿತವಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಉತ್ಖನನದ ಸ್ಥಳಕ್ಕೆ ಹಸಿರು ಪರದೆ ಹಾಕಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಸದ್ಯ ಅಗೆತದ ವೇಳೆ ಸಿಕ್ಕಿರುವ ಮೂಳೆಗಳು ಸೊಂಟದ ಕೆಳಭಾಗದವು ಎಂದು ಎಸ್‌ಐಟಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಗೆಯುವ ಕೆಲಸ ಮುಂದುವರಿಸಲಾಗಿದೆ. ಅವಶೇಷ ಸಿಕ್ಕ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ತಜ್ಞರು ಭೇಟಿ ನೀಡುತ್ತಿದ್ದಾರೆ. ಅಲ್ಲದೇ ಡಾಗ್ ಸ್ಕ್ವಾಡ್ ಅನ್ನು ಕೂಡ ಕರೆಸಲಾಗಿದೆ.

ಮೂಳೆ ಸಿಕ್ಕ ವಿಚಾರವನ್ನು ಹಲವು ಮಾಧ್ಯಮಗಳು ನೇರಪ್ರಸಾರ ಮಾಡುತ್ತಿರುವುದರಿಂದ ಹಸಿರು ಪರದೆ ಹಾಕಿ, ಕಾರ್ಮಿಕರಿಂದಲೇ ಅಗೆಯುವ ಕೆಲಸವನ್ನು ಮುಂದುವರೆಸಲಾಗಿದೆ.

Advertisements

ಕರಾವಳಿಯಲ್ಲಿ ನಿರಂತರವಾಗಿ ಮಳೆಯೂ ಸುರಿಯುತ್ತಿದೆ. ಇದು ಸ್ವಲ್ಪಮಟ್ಟಿಗೆ ಉತ್ಖನನ ಕಾರ್ಯಕ್ಕೆ ಸಮಸ್ಯೆ ಉಂಟು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ಖನನದ ಆರನೇ ಸ್ಥಳದ ಪಕ್ಕದಲ್ಲೇ ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ ಎಸ್‌ಐಟಿ ತಂಡ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪಿಕಪ್ ಮೂಲಕ ಕಬ್ಬಿಣದ ಕಂಬಿ, ತಗಡು ಶೀಟು ಸೇರಿದಂತೆ ಹೆಚ್ಚುವರಿ ಕಾರ್ಮಿಕರನ್ನೂ ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಬಿಜೆಪಿಯ ಮತಗಳ್ಳತನವನ್ನು ಜನರ ಗಮನಕ್ಕೆ ತರಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ: ಡಿ ಕೆ ಶಿವಕುಮಾರ್

ಸದ್ಯ ಕೆಲವೊಂದು ಮೂಳೆ ಸಿಕ್ಕಿರುವುದರಿಂದ ಇಂದು ಉತ್ಖನನ ಕಾರ್ಯವನ್ನು ರಾತ್ರಿಯೂ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 6ನೇ ಪಾಯಿಂಟ್‌ನಲ್ಲಿ ಮೂಳೆ ಸಿಕ್ಕ ವಿಚಾರ ತಿಳಿಯುತ್ತಿದ್ದಂತೆಯೇ ಕುತೂಹಲಿಗರ ಸಂಖ್ಯೆಯೂ ಜಾಸ್ತಿಯಾಗಿದೆ. ಹಲವು ಮಂದಿ ನೇತ್ರಾವತಿ ನದಿಯಲ್ಲಿರುವ ಸೇತುವೆ ಮೇಲೆ ನಿಂತು ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದಾರೆ.

ಜನ1
ಜನ 2
Dharmasthala 4
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X