ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದರು. ಆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಸದ್ಯ ಆತನನ್ನು ವಿಚಾರಣೆ ನಡೆಸಿದ ಬೆಳ್ತಂಗಡಿಯ ನ್ಯಾಯಾಲಯವು, ಹೆಚ್ಚಿನ ತನಿಖೆಗಾಗಿ 10 ದಿನಗಳ ಕಾಲ ಆತನನ್ನು ಎಸ್‌ಐಟಿ ವಶಕ್ಕೆ ನೀಡಿರುವುದಾಗಿ ವರದಿಯಾಗಿದೆ.
ನ್ಯಾಯಾಲಯಕ್ಕೆ ಹಾಜರುಪಡಿಸುವುದಕ್ಕೂ ಮುನ್ನ ದೂರುದಾರರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಎಸ್‌ಐಟಿ ಅಧಿಕಾರಿಗಳು, ವೈದ್ಯಕೀಯ ತಪಾಸಣೆ ನಡೆಸಿದ್ದರು.
ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್
ಈವರೆಗೆ ಮಾಸ್ಕ್ ಧರಿಸಿಕೊಂಡಿದ್ದ ಸಾಕ್ಷಿ ದೂರುದಾರನ ಬಂಧನವಾಗುತ್ತಿದಂತೆಯೇ ಹೆಸರು, ಊರು, ವಿವರ ಸೇರಿದಂತೆ ಫೋಟೋ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ದೂರುದಾರ ಆಗಿದ್ದ ಆರೋಪಿ ಮಂಡ್ಯ ಜಿಲ್ಲೆಯ ಮಂಡ್ಯ ತಾಲೂಕಿನ ಚಿಕ್ಕಬೆಳ್ಳಿ ನಿವಾಸಿ. ಆತನ ಹೆಸರು ಸಿ.ಎನ್.ಚಿನ್ನಯ್ಯ ಯಾನೆ ಚೆನ್ನ ಎಂದು ಮಾಹಿತಿ ಸದ್ಯ ಹರಿದಾಡಿದೆ.
