ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣುಮಗು ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದ್ದು, ಶಿಶು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿನ ಕಾಡುದಾರಿಯಲ್ಲಿ ಹೆಣ್ಣು ಮಗುವನ್ನು ಬಿಟ್ಟು ಹೋಗಿ ಅಮಾನವೀಯತೆ ಮೆರೆದಿದ್ದು, ದಾರಿಹೋಕರು ಮಗು ಇರುವುದನ್ನು ಗಮನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಮಗುವನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾಸನ | ಗುಡುಗು ಸಹಿತ ಮಳೆ; ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ
ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮಗುವನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇದೀಗ ಪೊಲೀಸರು ಮಗುವಿನ ಪೊಷಕರ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.