ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಸಂದರ್ಭದಲ್ಲಿ ತಲೆಬುರುಡೆ ಪತ್ತೆಯಾಗಿದೆ. ‘ಸಾಮೂಹಿಕ ಅಂತ್ಯಕ್ರಿಯೆ’ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ತಲೆಬುರುಡೆ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರಿಗೆ ದೂರನ್ನು ಸಲ್ಲಿಸಿದ್ದಾರೆ. ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.
ಇದನ್ನು ಓದಿದ್ದೀರಾ? ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್ಐಆರ್ ದಾಖಲು
ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ತನಿಖೆಯ ಭಾಗವಾಗಿ ‘ಸಾಮೂಹಿಕ ಅಂತ್ಯಕ್ರಿಯೆ’ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ತಲೆಬುರುಡೆ ಪತ್ತೆಯಾಗಿದೆ.
ಎಸ್ಪಿಯವರಿಗೆ ಸಲ್ಲಿಸಿರುವ ಸುಮಾರು ಆರು ಪುಟಗಳ ದೂರನ್ನು ವಕೀಲರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು. ಸುರಕ್ಷತೆಯ ದೃಷ್ಟಿಯಿಂದ ಆ ವ್ಯಕ್ತಿಯ ಹೆಸರನ್ನು ಇನ್ನೂ ಕೂಡ ಬಹಿರಂಗಗೊಳಿಸಿಲ್ಲವಾದರೂ, ಆ ವ್ಯಕ್ತಿ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದರು ಎಂದು ಖಾತ್ರಿಪಡಿಸಿದೆ. ಅಲ್ಲದೇ, ಅವರು 1995ರಿಂದ 2014ರ ಡಿಸೆಂಬರ್ ವರೆಗೆ ಉದ್ಯೋಗದಲ್ಲಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
