ಧರ್ಮಸ್ಥಳ ಗಲಾಟೆ | ಬಿಗ್‌ಬಾಸ್ ಸ್ಫರ್ಧಿ ರಜತ್ ಕುಟುಂಬಕ್ಕೆ ಜೀವ ಬೆದರಿಕೆ: ದೂರು ದಾಖಲಿಸಿದ ದಂಪತಿ

Date:

ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ಡಿಜಿಐಜಿಪಿ ಕಚೇರಿಗೆ ಆಗಮಿಸಿ, ತಮಗೆ ಬಂದಿರುವ ಜೀವ ಬೆದರಿಕೆ ಸಂದೇಶಗಳು ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ರಜತ್ ಅವರ ಪತ್ನಿ ಅಕ್ಷತಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ‘ಕೊಲೆ ಮಾಡುವೆ, ಕತ್ತರಿಸುವೆ’ ಎಂಬ ಬೆದರಿಕೆ ಸಂದೇಶಗಳು ಬಂದಿವೆ ಎಂದು ಆರೋಪಿಸಿ ಈ ದೂರು ದಾಖಲಾಗಿದೆ. ಸದ್ಯ ಈ ದೂರು ಸೈಬರ್ ಠಾಣೆಗೆ ವರ್ಗಾವಣೆಯಾಗಿದೆ.

ದೂರು ನೀಡಿದ ಬಳಿಕ ಈ ಬಗ್ಗೆ ಮಾತನಾಡಿರುವ ರಜತ್, “ನಾವು ಧರ್ಮಸ್ಥಳಕ್ಕೆ ಸೌಜನ್ಯಗೆ ನ್ಯಾಯ ಕೇಳಲು ಹೋಗಿದ್ದೆವು. ಯಾವುದೇ ಜಾತಿ, ಧರ್ಮ, ದೇವಸ್ಥಾನದ ಬಗ್ಗೆ ನಾವು ಮಾತನಾಡಿಲ್ಲ. ಹಾಡಹಗಲೇ ನಮ್ಮ ಕಣ್ಣ ಮುಂದೆ ಗಲಾಟೆ ನಡೆದಿದೆ. ಹಲ್ಲೆ ಮಾಡಿದವರ ವಿರುದ್ಧ ಮತ್ತು ಬೆದರಿಕೆ ಸಂದೇಶ ಕಳುಹಿಸಿದವರ ವಿರುದ್ಧ ದೂರು ಕೊಟ್ಟಿದ್ದೇವೆ. ನಾವು ಬೆದರಿಕೆಗಳಿಗೆ ಹೆದರುವವರಲ್ಲ” ಎಂದರು.

ಬಳಿಕ ಮಾತನಾಡಿದ ಅಕ್ಷತಾ ತಮ್ಮ ಸಾಮಾಜಿಕ ಜಾಲತಾಣದ ಸ್ಟೇಟಸ್‌ನಲ್ಲಿ, ‘ನಿನ್ನ ಗಂಡನನ್ನು ವಾಪಸ್ ಕರೆಸಿಕೊ, ಇದು ಮಂಡ್ಯ ಅಲ್ಲ, ಕರಾವಳಿ’ ಎಂಬ ಸಂದೇಶವನ್ನು ಶಾರದಾ ಭಟ್ ಎಂಬುವವರು ಕಳಿಸಿದ್ದಾರೆ. ಇದು ಜೀವ ಬೆದರಿಕೆಯಾಗಿದ್ದು, ದೂರು ನೀಡಿದ್ದೇವೆ. ನಾವು ಮಂಡ್ಯದವರು, ಹುಟ್ಟಿ ಬೆಳೆದಿದ್ದು ಮಂಡ್ಯದಲ್ಲಿ. ವಾಪಸ್ ಕರೆಯುವ ಅವಶ್ಯಕತೆ ಇಲ್ಲ ಎಂದರು.

ಏನಿದು ಬೆಳವಣಿಗೆ?

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾಗಿದ್ದ ಸೌಜನ್ಯ ಮನೆಗೆ ಭೇಟಿ ನೀಡಿದ್ದರು. ಸ್ಥಳೀಯ ಯೂಟ್ಯೂಬರ್‌ಗಳಿಗೆ ಪಾಂಗಳ ಕ್ರಾಸ್ ಬಳಿ ಸಂದರ್ಶನ ನೀಡುತ್ತಿದ್ದ ವೇಳೆ ಕೆಲವು ಗೂಂಡಾಗಳು ಬಂದು ಯೂಟ್ಯೂಬರ್ಸ್‌ಗಳಿಗೆ ಹಲ್ಲೆ ನಡೆಸಿದ್ದರು. ಈ ವೇಳೆ ರಜತ್ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಬಳಿಕ ಅಲ್ಲಿಂದ ತೆರಳಿದ್ದ ರಜತ್, ಈ ಘಟನೆಯ ಬಳಿಕ ತನಗೆ ಜೀವ ಬೆದರಿಕೆ ಬಂದಿರುವುದಾಗಿ ತಿಳಿಸಿದ್ದಾರೆ.

ದೂರು 3
ಶಾರದಾ ಭಟ್ ಎಂಬುವವರ ಫೇಸ್‌ಬುಕ್ ಪೋಸ್ಟ್

ಅಲ್ಲದೇ, ಸೌಜನ್ಯ ಮನೆಗೆ ಭೇಟಿಯ ಸಂಬಂಧ ಶಾರದಾ ಭಟ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ, ‘ಬಿಗ್ ಬಾಸ್ ರಜತ್ ಅವರ ಪತ್ನಿ ಹೆಸರು ಅಕ್ಷತಾ. ಇವರು ರಜತ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ, ಒಂದು ಗಂಡು ಮತ್ತು ಒಂದು ಹೆಣ್ಣು.ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ ಅಕ್ಷತಾ ಅವರೇ…ಇದು ಮಂಡ್ಯ ಅಲ್ಲ ಕರಾವಳಿ…… ” ಎಂದು ಪೋಸ್ಟ್‌ ಮಾಡಿದ್ದರು. ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...