ಧರ್ಮಸ್ಥಳ | ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್‌ಗೆ ಎಸ್‌ಐಟಿ ಬುಲಾವ್!

Date:

Advertisements

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ಆರಂಭಿಸಿದೆಯಾ ಎಂಬ ಪ್ರಶ್ನೆ ಕೂಡ ಮೂಡತೊಡಗಿದೆ.

ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡಿದ್ದು, ಆರೋಪಕ್ಕೊಳಗಾಗಿರುವವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಗೆ ಒಳಗಾಗಿರುವವರಲ್ಲಿ ಒಬ್ಬರಾದ ಉದಯ್ ಕುಮಾರ್ ಜೈನ್, ‘ತಾವು ಯಾವುದೇ ತನಿಖೆಗೂ ಸಿದ್ಧವಿದ್ದು, ಮತ್ತೊಮ್ಮೆ ತಮ್ಮ ಬ್ರೈನ್ ಮ್ಯಾಪಿಂಗ್ ಮಾಡಲು ಕೂಡ ಸಿದ್ಧನಿದ್ದೇನೆ’ ಎಂದು ತಿಳಿಸಿದ್ದಾರೆ.

ಸೌಜನ್ಯ ಕುಟುಂಬಸ್ಥರು ಉದಯ್ ಕುಮಾರ್ ಜೈನ್, ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್ ಅವರ ಮೇಲೆ ಆರೋಪ ಮಾಡಿದ್ದರು. ಅವರ ಪೈಕಿ ಉದಯ್ ಜೈನ್ ಎಸ್‌ಐಟಿ ಮುಂದೆ ಬುಧವಾರ ಹಾಜರಾಗಿದ್ದಾರೆ.

ಎಸ್‌ಐಟಿ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಉದಯ್ ಕುಮಾರ್ ಜೈನ್, “ನಿನ್ನೆ ರಾತ್ರಿ ಎಸ್‌ಐಟಿ ಅಧಿಕಾರಿಯೋರ್ವರು ನನಗೆ ಕರೆ ಮಾಡಿ ಇವತ್ತು ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಹಾಗಾಗಿ ಬಂದಿದ್ದೇನೆ. ನಾನು ಯಾವುದೇ ವಿಚಾರಣೆಗೂ ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.

ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಗೂ ತಾನು ಸಂಪೂರ್ಣ ಸಹಕರಿಸಿರುವುದಾಗಿ ಹೇಳಿರುವ ಉದಯ್ ಜೈನ್,’ನಮ್ಮ ಬ್ರೈನ್ ಮ್ಯಾಪಿಂಗ್ ಕೂಡಾ ಆಗಿದೆ. ಮತ್ತೊಮ್ಮೆ ಬ್ರೈನ್ ಮ್ಯಾಪಿಂಗ್ ಮಾಡುವುದಕ್ಕೂ ನಾವು ಸಿದ್ಧರಿದ್ದೇವೆ. ನಮ್ಮ ಬಳಿ ಮಾನನಷ್ಟ ಮೊಕದ್ದಮೆ ಹೂಡಲು ಹಣವಿಲ್ಲ. ಅಲ್ಲದೆ, ಎಸ್‌ಐಟಿ ತನಿಖೆಗೆ ನಾನು ಸಾಯುವವರೆಗೂ ಸಹಕಾರ ನೀಡಲು ಸಿದ್ಧನಿದ್ದೇನೆ. ಈ ಪ್ರಕರಣಕ್ಕೆ ಈಡಿ ಪ್ರವೇಶಿಸಿದ್ದು, ಸತ್ಯ ಹೊರಬರುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಸಿಬ್ಬಂದಿ ಸಹಿತ ಐವರ ಬಂಧನ

“ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿಗೆ ಕರೆದಿರಲೂಬಹುದು. ಚಿನ್ನಯ್ಯ ನೀಡಿದ ಹೇಳಿಕೆಯ ಕಾರಣಕ್ಕೂ ಕರೆದಿರಬಹುದು. ಬುರುಡೆ ಪ್ರಕರಣದ ದಿಕ್ಕು ಬದಲಿಸುವ ಹುನ್ನಾರ ಇದು. ಗುಂಡಿ ಎಲ್ಲಾ ತೋಡಿಯಾಗಿದೆ. ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನೆಲೆಗೆ ತರುತ್ತಿದ್ದಾರೆ” ಎಂದು ಉದಯ್ ಕುಮಾರ್ ಜೈನ್ ಇದೇ ವೇಳೆ ಹೇಳಿಕೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

Download Eedina App Android / iOS

X