ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮತ್ತೆ ಎಸ್ಐಟಿ ಕಸ್ಟಡಿಗೆ ನೀಡಿದೆ.
ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ವಿಜಯೇಂದ್ರ.ಹೆಚ್.ಟಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಗುಪ್ತ ಕೋಣೆಯಲ್ಲಿ ಆರೋಪಿ ಚಿನ್ನಯ್ಯನನ್ನು ವಿಚಾರಣೆ ನಡೆಸಿದ ಬಳಿಕ, ಮತ್ತೆ ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಈ ಬೆನ್ನಲ್ಲೇ ನ್ಯಾಯಾಲಯ ಎಸ್ಐಟಿಗೆ ಮತ್ತೆ 4 ದಿನ (ಸೆ.6 ವರೆಗೆ) ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಇದನ್ನು ಓದಿದ್ದೀರಾ? ಧರ್ಮಸ್ಥಳ | ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್‌ಗೆ ಎಸ್‌ಐಟಿ ಬುಲಾವ್!
ಕಳೆದ ಆ. 23 ರಂದು ಎಸ್.ಐ.ಟಿ ತಂಡ ಚಿನ್ನಯ್ಯ ತಂದಿದ್ದ ಬುರುಡೆಯ ವಿಚಾರದಲ್ಲಿ ಬಂಧಿಸಿದ್ದರು. ಅದೇ ದಿನ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಸೆ.3 ರವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿತ್ತು.
