ಧರ್ಮಸ್ಥಳ | ಸಾಕ್ಷಿ ದೂರುದಾರ ಚಿನ್ನಯ್ಯ ಮತ್ತೆ ಎಸ್ಐಟಿ ಕಸ್ಟಡಿಗೆ

Date:

Advertisements

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮತ್ತೆ ಎಸ್ಐಟಿ ಕಸ್ಟಡಿಗೆ ನೀಡಿದೆ.

ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ವಿಜಯೇಂದ್ರ‌.ಹೆಚ್.ಟಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಗುಪ್ತ ಕೋಣೆಯಲ್ಲಿ ಆರೋಪಿ ಚಿನ್ನಯ್ಯನನ್ನು ವಿಚಾರಣೆ ನಡೆಸಿದ ಬಳಿಕ, ಮತ್ತೆ ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಈ ಬೆನ್ನಲ್ಲೇ ನ್ಯಾಯಾಲಯ ಎಸ್ಐಟಿಗೆ ಮತ್ತೆ 4 ದಿನ (ಸೆ.6 ವರೆಗೆ) ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ | ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್‌ಗೆ ಎಸ್‌ಐಟಿ ಬುಲಾವ್!

ಕಳೆದ ಆ. 23 ರಂದು ಎಸ್.ಐ.ಟಿ ತಂಡ ಚಿನ್ನಯ್ಯ ತಂದಿದ್ದ ಬುರುಡೆಯ ವಿಚಾರದಲ್ಲಿ ಬಂಧಿಸಿದ್ದರು. ಅದೇ ದಿನ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಸೆ.3 ರವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

Download Eedina App Android / iOS

X