ಹಾಸನ | ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಮರು ಜಾರಿಗೆ ಆಗ್ರಹಿಸಿ ಧರಣಿ

Date:

  • ಮುಸ್ಲಿಂ ಸಮುದಾಯ ಮುಖ್ಯವಾಹಿನಿಗೆ ಬರದಂತೆ ತಡೆಯಲು ಷಡ್ಯಂತ್ರ
  • ನಿರ್ದಿಷ್ಟ ಸಮುದಾಯ ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿ

ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿರುವುದು ಅಸಂವಿಧಾನಿಕ. ಇದೊಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲದಿರುವುದರಿಂದ 2(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು” ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

“ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿವೆ. ವಾಸ್ತವಾಂಶ ಹೀಗಿದ್ದರೂ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಲಾಗಿದೆ” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅಲೆಮಾರಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.2ರಷ್ಟು ಹೆಚ್ಚಳಕ್ಕೆ ಆಗ್ರಹ

“ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಬಾರದು. ಈ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನಿಗದಿಯಾಗಿದ್ದ 2(ಬಿ) ಮೀಸಲಾತಿಯನ್ನು ಮರು ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಧರಣಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಿದ್ದಿಕ್ ಆನೆಮಹಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯಾದ್ ಫರೀದ್, ಸಮಿತಿ ಸದಸ್ಯ ಫೈರೋಜ್ ಪಾಶ, ಶಜಿಲ್ ಅಹಮದ್, ಅಮಿರ್ ಜಾನ್, ಅಮಾನುಲ್ಲಾ ಬಾಬು, ಸೈಯಾದ್ ಸಪೀರ್, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರದೀಪ್ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ...

ಧಾರವಾಡ | ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳ ಬಂಧನ

ಧಾರವಾಡದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಕೊಲೆ...

ಧಾರವಾಡ | ಕುಸ್ತಿಪಟುಗಳ ಹೋರಾಟ ಬೆಂಬಲಿಸಿದವರ ಬಂಧನ ಖಂಡಿಸಿ ಪ್ರತಿಭಟನೆ

ಬ್ರಿಜ್ ಭೂಷಣ್ ಪರವಾಗಿ ಕೇಂದ್ರ ಸರ್ಕಾರ ನಿಂತಿರುವುದು ನಿಜಕ್ಕೂ ಖಂಡನೀಯ ಕುಸ್ತಿಪಟುಗಳ ಹೋರಾಟ...