ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

Date:

ಕನ್ನಡ ಸಾಹಿತ್ಯ ಪರಿಷತ್ತು 111ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಸಮಾಜದ ಬೇರೆ ಬೇರೆ ರಂಗಗಳಲ್ಲಿರುವ ಸಾಹಿತಿಗಳನ್ನು ಗುರುತಿಸಿ ಅವರನ್ನು ಮುನ್ನಲೆಗೆ ತರುವ ಕೆಲಸ ಮಾಡಿದೆ‌ ಎಂದು ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ ಹೇಳಿದರು.

- Advertisement -

ಸಸಿಗೆ ನೀರೆರೆವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಎಲ್ಲಾ ಅಧ್ಯಕ್ಷರುಗಳು ತಮ್ಮ ಮಿತಿಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಸಮೃದ್ಧಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಬಂಡಾಯ ಲೇಖಕ ಡಾ. ಚಂದ್ರಶೇಖರ್ ಪಾಟೀಲರು ಅಧಿಕಾರಶಾಹಿಯನ್ನು ಪ್ರತಿರೋಧಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸಿದ ಮಾದರಿ ನಮ್ಮ ಮುಂದಿದೆ. ಇಂದಿನ ಯುವಜನರು ಇದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
IMG 20250506 WA0001

ಮುಖ್ಯ ಅತಿಥಿ ಪ್ರೊ .ಶ್ಯಾಮಸುಂದರ ಬಿದರಗುಂದಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒಗ್ಗಟ್ಟು ಮತ್ತು ಅಸ್ಮಿತೆಯ ಸಂಕೇತವಾಗಿದೆ. ನಾವೆಲ್ಲ ಒಂದಾಗಿ ಬಾಳಲು ನಮಗೆ ಸಾಹಿತ್ಯದ ಜ್ಞಾನ ಅಗತ್ಯವಾಗಿದೆ. ಇಂತಹ ಜ್ಞಾನ ನೀಡುವ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಶ್ರಮಿಸುತ್ತಿದೆ. ಅಂತೆಯೇ ಧಾರವಾಡದಲ್ಲಿರುವ ವಿದ್ಯಾವರ್ಧಕ ಸಂಘವು ಕನ್ನಡ ನಾಡು ನುಡಿಯ ಪ್ರಸಾರಕ್ಕಾಗಿ ಕೆಲಸ ಮಾಡುತ್ತಿರುವುದನ್ನು ಸ್ಮರಿಸಿದರು.

ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ತಲೆಮಾರಿನ ಯುವಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸತ್ವವನ್ನು ಪಡೆದುಕೊಂಡು ಅದರ ಬೆಳವಣಿಗೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ ಎಂದರು. ಸುನಂದಾ ನಿಂಬನಗೌಡರ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಡಾ. ಜಿನದತ್ತ ಹಡಗಲಿ ಸ್ವಾಗತಿಸಿದರು.‌ ಡಾ. ಮೇಟಿ ರುದ್ರೇಶ್ ನಿರೂಪಿಸಿದರು. ಕು. ಬಾನುಬಿ ವಂದಿಸಿದರು. ಈ ವೇಳೆ ಡಾ. ನಿಜಲಿಂಗಪ್ಪ ಮಟ್ಟಿಹಾಳ, ಡಾ.‌ ಶ್ಯಾಮಸುಂದರ ಬಿದರಕುಂದಿ ಹಾಗೂ ಸುನಂದಾ ನಿಂಬನಗೌಡರ ಅವರನ್ನು ಸನ್ಮಾನಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಭಾರತೀಯರಿಗೆ ವರವಾಗಿ ದೊರೆತ ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ರಂಜಾನ ದರ್ಗಾ

ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಐ. ಎ. ಮುಲ್ಲಾ ಹಾಗೂ ಡಾ. ಎನ್. ಬಿ. ನಾಲತವಾಡ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಪ್ರೊ ಡಾ. ಅಬ್ದುಲ್‌ಕರಮ ಆದೋನಿ ಕುರಾನ್ ಪಠಣ ಮಾಡಿದರು. ಶ್ವೇತಾ ವರಚಗಿ ಶ್ಲೋಕ ಪಠಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...