ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

Date:

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅಂತಿಮವಾಗಿ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 97,398 ಪದವೀಧರ ಮತದಾರರಿದ್ದು, 137 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ತಿಳಿಸಿದರು.

- Advertisement -

ಧಾರವಾಡದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಿದ್ದ 18 ಅಭ್ಯರ್ಥಿಗಳ ಪೈಕಿ ನಾಲ್ವರು ಉಮೇದುವಾರಿಕೆ ಹಿಂಪಡೆದಿದ್ದಾರೆ. ಕಾಂಗ್ರೆಸ್‌ನ ಮೋಹನ ಲಿಂಬಿಕಾಯಿ, ಬಿಜೆಪಿಯ ಸಂಕನೂರ ಎಸ್.ವಿ. ಸೇರಿದಂತೆ 14 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜಿಲ್ಲಾವಾರು ಮತದಾರರು: ಧಾರವಾಡದಲ್ಲಿ 35,117, ಗದಗದಲ್ಲಿ 21,594, ಹಾವೇರಿಯಲ್ಲಿ 24,648 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 16,039 ಮತದಾರರಿದ್ದಾರೆ. ಒಟ್ಟು 128 ಮುಖ್ಯ ಮತಗಟ್ಟೆ ಮತ್ತು 9 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೆ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಮತಗಟ್ಟೆ ಸಿಬ್ಬಂದಿ ನಿಯೋಜನೆ, ತರಬೇತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಚುನಾವಣಾ ಮಾರ್ಗಸೂಚಿ ನೀಡಲಾಗಿದ್ದು, ಅನುಮತಿಗಳಿಗಾಗಿ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗಿದೆ.

ಚುನಾವಣೆಯು ಮತಪತ್ರಗಳ ಮೂಲಕ ನಡೆಯಲಿದ್ದು, ನೋಟಾ ಆಯ್ಕೆಗೆ ಅವಕಾಶವಿಲ್ಲ. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿ ಸ್ಥಾಪಿಸಲಾಗಿದೆ ಎಂದು ಜಾನಕಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಈ ದಿನ ಸಂಪಾದಕೀಯ | ರಾಜಧಾನಿ ದೆಹಲಿಗೆ ದಿಗ್ಬಂಧನ- ಸಹಸ್ರಾರು ಯುವಜನರ ಬಂಧನ, ಇದೇನು ತುರ್ತುಪರಿಸ್ಥಿತಿಯೇ?

ದೇಶದ ರಾಜಧಾನಿಗೇ ದಿಗ್ಬಂಧನ ಹಾಕಲಾಗಿದೆ. ಇದೇನು ತುರ್ತುಪರಿಸ್ಥಿತಿಯೇ? ಯುದ್ಧದ ಭೀತಿಯೇ? ಏನೂ...