ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ 2024 ರಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 168 ಅಕ್ರಮ ಮದ್ಯ ಮಾರಾಟ ಪ್ರಕರಣಗಳು ದಾಖಲಾಗಿದ್ದು, 2025ರಲ್ಲಿ ಈಗಾಗಲೇ 33 ಪ್ರಕರಣ ದಾಖಲಾಗಿವೆ. ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ಪರಿಶೀಲಿಸಿ ಪ್ರಕರಣ ದಾಖಲಿಸಲು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರ ಜೊತೆಗೆ ಹೆದ್ದಾರಿಗಳಲ್ಲಿರುವ ದಾಬಾಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುವುದು ಕಂಡು ಬಂದರೆ ಕೇಸ್ ಮಾಡಲಾಗುವುದು.
ಇದನ್ನು ಓದಿದ್ದೀರಾ? ಮೇ.2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದರೆ; ಈ ಕುರಿತು ಸಾರ್ವಜನಿಕರು ಯಾವುದೇ ಸಮಯದಲ್ಲಿ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಅಥವಾ 112 ನಂಬರಿಗೆ ಕರೆ ಮಾಡಿದರೆ; ತಕ್ಷಣ ಪರಿಶೀಲಿಸಿ ಕೇಸ್ ಮಾಡಲಾಗುವುದು ಎಂದರು.