ಧಾರವಾಡ | 29 ಇಸ್ಪೀಟು ಆಟಗಾರರ ಬಂಧನ; ₹24,295 ನಗದು ಜಪ್ತಿ

Date:

ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜಾಟದ (ಇಸ್ಪೀಟು) ವಿರುದ್ಧ ಪೊಲೀಸ್ ಇಲಾಖೆ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದು, ಅಕ್ಟೋಬರ್ 21 ರಿಂದ 23ರವರೆಗೆ, 3 ದಿನಗಳ ಅವಧಿಯಲ್ಲಿ 5 ಪ್ರತ್ಯೇಕ ದಾಳಿ ನಡೆಸಿ, ಜೂಜಾಟದ ಜಾಲವನ್ನು ಭೇದಿಸಿದೆ. ಈ ಕಾರ್ಯಾಚರಣೆಗಳ ಮೂಲಕ ಒಟ್ಟು 29 ಜನರ ಮೇಲೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -

ಓರ್ವ ಆರೋಪಿಯು ಪೊಲೀಸ್ ದಾಳಿ ವೇಳೆ ಓಡಿ ಹೋಗಿದ್ದಾನೆ. ಗುಡಗೇರಿ ಠಾಣಾ ಪೊಲೀಸರು ಗುಡಗೇರಿ, ಗೌಡಗೇರಿ, ಲಕ್ಷ್ಮೀಶ್ವರ ಮತ್ತು ಕಳಸ ಗ್ರಾಮಗಳ ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದಾರೆ. ಎಲ್ಲಾ ಐದು ಪ್ರಕರಣಗಳ ದಾಳಿಯ ವೇಳೆ ಜೂಜಾಟಕ್ಕೆ ಬಳಸುತ್ತಿದ್ದ 52 ಇಸ್ಪೀಟ್ ಎಲೆಗಳ ಸಮೇತ ಒಟ್ಟು ₹24,295/- (ಇಪ್ಪತ್ತನಾಲ್ಕು ಸಾವಿರದ ಇನ್ನೂರ ತೊಂಬತ್ತೈದು ರೂಪಾಯಿಗಳು) ನಗದನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅ. 21 ರಂದು ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 14 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಒಟ್ಟು ₹9,760/- ನಗದು ವಶಪಡಿಸಿಕೊಳ್ಳಲಾಗಿದೆ. ಅ. 22ರಂದು ನಡೆದ ಕಾರ್ಯಾಚರಣೆಯಲ್ಲಿ 7 ಜನರ ಮೇಲೆ ಎಫ್‌ಐಆರ್ ದಾಖಲಿಸಿ ₹5,110/- ನಗದನ್ನು ಜಪ್ತಿ ಮಾಡಲಾಗಿದೆ. ಅ. 23 ರಂದು ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 12 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಈ ದಾಳಿಗಳಲ್ಲಿ ₹9,325/- ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಗುಡಗೇರಿ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಣವನ್ನು ಪಣಕ್ಕೆ ಹಚ್ಚಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಬಂಧಿತರೆಲ್ಲರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...