ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್ ಎಡವಟ್ಟಿನಿಂದಲೋ ಅಥವಾ ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಹಣ ವರ್ಗಾವಣೆ ಅಗಿದೆ ಎಂದು ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
“ತಾವು ಯಾರಿಗೂ ತಮ್ಮ ವೈಯಕ್ತಿಕ ಮಾಹಿತಿಯನ್ಉ ನೀಡಿಲ್ಲ. ಆದರೂ, ಹಣ ವರ್ಗಾವಣೆಯಾಗಿದೆ. ಬ್ಯಾಂಕ್‌ನವರು ಭದ್ರತೆ ಇರುವ ನೆಟ್ ಸೆಕ್ಯೂರಿಟಿ ಬಳಸದೇ ಇರುವುದರಿಂದಲೂ ಅಥವಾ ಯಾವುದೋ ಅಧಿಕಾರಿಯ ಹಸ್ತಕ್ಷೇಪದಿಂದಲೋ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿಕೊಂಡಿದ್ದಾನೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.
“ಬ್ಯಾಂಕ್ ಖಾತೆಗೆ ಲಿಂಕ್ ಇರುವ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದ ಸಂದರ್ಭದಲ್ಲಿ ಹಣ ವರ್ಗಾವಣೆ ಆಗಿದೆ. ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ 50,000 ರೂ.ನಂತೆ 12 ಬಾರಿ 6 ಲಕ್ಷ ರೂ. ವರ್ಗಾವಣೆ ಆಗಿದೆ. 45,000 ರೂ.ನಂತೆ ಮೂರು ಬಾರಿ, 25,000 ರೂ.ನಂತೆ ಎರಡು ಬಾರಿ ಹಣ ವರ್ಗಾವಣೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.