2022-23ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ತೇರ್ಗಡೆಯಾದ 7,246 ವಿದ್ಯಾರ್ಥಿಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ತೇರ್ಗಡೆಯಾದ 1,291 ವಿದ್ಯಾರ್ಥಿಗಳು ಒಟ್ಟು 8,537 ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಜಿಲ್ಲಾಡಳಿತ ಹೇಳಿದೆ.
“ತೇರ್ಗಡೆಯಾಗಿರುವ ನಗರ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಸೇವಾ ಸಿಂಧು, ಕರ್ನಾಟಕ-ಒನ್ ಪೋರ್ಟಲ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಲು ತಿಳಿಸಲಾಗಿದೆ” ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಳಿಸಿದ್ದಾರೆ.
“ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ನಿರ್ದೇಶಿಸಿದಂತೆ, ಎನ್‍ಎಡಿ (NAD) ಪೋರ್ಟಲ್‍ನಲ್ಲಿ ನೋಂದಾಯಿಸಿರುವ ಸುಮಾರು 4 ಲಕ್ಷ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಅವರ ಮೊಬೈಲ್‍ಗಳಿಗೆ ಸಮೂಹ ಸಂದೇಶ ರವಾನಿಸಲಾಗಿದೆ” ಎಂದು ಹೇಳಿದ್ದಾರೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 18005999918 ಗೆ ಸಂಪರ್ಕಿಸಬಹುದೆಂದು ಹೇಳಿದ್ದಾರೆ.