ಧಾರವಾಡ | ಏ. 30 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ

Date:

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 30 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದಾರೆ.

- Advertisement -

ಈ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ಡಾ. ಗಿರೀಶ ದೇಸೂರ ವಿಶೇಷ ಉಪನ್ಯಾಸ ನೀಡುವರು.

ಕರ್ನಾಟಕ ವಿಧಾನ ಪರಿಷತ್ತ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ ಪೀರ್.ಎಸ್.ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.

ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎನ್.ಹೆಚ್.ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಭಾಗವಹಿಸುವರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸರ್.ಸಿದ್ದಪ್ಪ ಕಂಬಳಿ, ಉತ್ತರ ಕರ್ನಾಟಕದಲ್ಲಿ ಅಕ್ಷರಜ್ಯೋತಿ ಪ್ರಜ್ವಲಿಸಲು ಹೋರಾಡಿದವರು: ರಾಮಪ್ಪ ಬಡಿಗೇರ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ.ಎಂ.ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...