ಧಾರವಾಡ | ಮಹದಾಯಿ ಹೋರಾಟಗಾರರ ಮತ್ತು ಜಿಲ್ಲೆಯ ರೈತ ಮುಖಂಡರ ಸಭೆ

Date:

Advertisements

ರೈತರ ಆತ್ಮಹತ್ಯೆ, ದನಗಳಿಗೆ ಮೇವು ಪೂರೈಕೆ, ಕುಡಿಯುವ ನೀರು, ಕೂಲಿ ಉದ್ಯೋಗ ನೀಡುವ ಬಗ್ಗೆ ಕಾಳಜಿ ವಹಿಸುವಂತೆ ಮಹದಾಯಿ ಹೋರಾಟಗಾರರು ಮತ್ತು ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಸಿದ್ದಾರೆ.

ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಹದಾಯಿ ಹೋರಾಟಗಾರರ ಮತ್ತು ಜಿಲ್ಲೆಯ ರೈತ ಮುಖಂಡರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬೆಳೆವಿಮೆ ಪರಿಹಾರ, ಬೆಳೆಪರಿಹಾರ, ಮಹದಾಯಿ ಯೋಜನೆ ಅನುಷ್ಠಾನ ಕುರಿತು ಚರ್ಚೆ ನಡೆದಿದೆ.

ಸಭೆಯಲ್ಲಿ ರೈತ ಮುಖಂಡರು ಮಹದಾಯಿ ನಿರಾವರಿ ಯೋಜನೆ ಅನಷ್ಠಾನ, ಹೆಸ್ಕಾಂನಿಂದ ನಿರಂತರ ವಿದ್ಯುತ್ ಪೂರೈಕೆ, ಕುಂದುಗೋಳ ಭಾಗದ ರೈತರ ಜಮಿನುಗಳಲ್ಲಿ ಚಿಗರಿ ಹಾವಳಿ, ಬೆಳೆವಿಮೆ ಪರಿಹಾರ, ಮದ್ಯಂತರ  ಬೆಳೆವಿಮೆ ಪರಿಹಾರ, ಅತಿವೃಷ್ಟಿಯಲ್ಲಿನ ಮನೆಹಾನಿ ಪರಿಹಾರ ಬಿಡುಗಡೆ, ಬ್ಯಾಂಕ್‍ಗಳಿಂದ ಒಟಿಎಸ್ ತೊಂದರೆ, ಅಣ್ಣಿಗೇರಿಯ ಗ್ರಾಮ ಚಾವಡಿ, ಜಿಲ್ಲೆಯ ಕೆರೆಗಳಿಗೆ ಕಾಳಿನದಿ ನೀರು ಪೂರೈಕೆ, ಪಹಣಿ ಪತ್ರಿಕೆಯಲ್ಲಿನ ವಿಷಯಗಳ ಅಪಡೆಟ್, ನಮ್ಮ ಹೊಲ-ನಮ್ಮ ದಾರಿ ಯೋಜನೆ ಜಾರಿ ಮತ್ತು ಮಹದಾಯಿ ಹಾಗೂ  ಉತ್ತರ ಕರ್ನಾಟಕದ ಕೃಷಿ, ನೀರಾವರಿ, ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ರೈತ ಮುಖಂಡರಿಗೆ ಸಮಯಾವಕಾಶ ನೀಡಲು ಮನವಿ ಮಾಡಿದರು.

Advertisements

ಸಭೆಯಲ್ಲಿ ಉಪಸ್ಥಿತರಿದ್ದ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಅವರು ಮಾತನಾಡಿ, ಮಹದಾಯಿ ಯೋಜನೆ ಜಾರಿಗೆ ನಾನು ಒಬ್ಬ ರೈತನಾಗಿ, ಹೊರಾಟಗಾರನಾಗಿ ಬದ್ಧನಾಗಿದ್ದೇನೆ. ಪ್ರಸಕ್ತ ರಾಜ್ಯ ಬಜೆಟದಲ್ಲಿ ಮುಖ್ಯಮಂತ್ರಿಗಳು ಅನುದಾನ ನೀಡಿದ್ದಾರೆ. ಕೇಂದ್ರ ಸಚಿವರು ಆಗಿರುವ ನಮ್ಮ ಸಂಸದರೊಂದಿಗೆ ರೈತರ ಸಭೆ ಜರುಗಿಸಿ, ಕೇಂದ್ರದ ಸಹಕಾರದಲ್ಲಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸೋಣ ಎಂದರು.

ಜಿಲ್ಲೆಯ ರೈತರಿಗೆ ಮಧ್ಯಂತರ ಬೆಳೆ ಪರಿಹಾರವಾಗಿ ಈಗಾಗಲೇ ಸುಮಾರು 70ಕೋಟಿ ಬಿಡುಗಡೆ ಆಗಿದೆ. ಶೀಘ್ರದಲ್ಲಿ ಪೂರ್ಣ ಪ್ರಮಾಣದ ಬೆಳೆವಿಮೆ ಬಿಡುಗಡೆ ಆಗುತ್ತದೆ. ರಾಜ್ಯ ಸರ್ಕಾರ ಆರಂಭಿಕವಾಗಿ ರೂ. 2 ಸಾವಿರ ಬೆಳೆ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿದೆ. ಇನ್ನು ಇದು ಪ್ರಗತಿಯಲ್ಲಿದೆ. ಕೇಂದ್ರದಿಂದ ಸುಮಾರು 17ಸಾವಿರ ಕೋಟಿ ಪರಿಹಾರ ಬಿಡುಗಡೆ ಆಗುವ ನಿರೀಕ್ಷೆ ಇದೆ. ಇದಕ್ಕೆ ರಾಜ್ಯದ ಪಾಲು ಸೇರಿಸಿ, ರೈತರಿಗೆ ಪರಿಹಾರ ಹಣ ನೀಡಲಾಗುವುದು ಎಂದು ಶಾಸಕರು ಹೇಳಿದರು.

ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಕ್ರಮವಹಿಸಿ, ಈಗಾಗಲೇ 50ಕ್ಕೂ ಹೆಚ್ಚು ವಿವಿಧ ರೈತ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಎಲ್ಲ ಪ್ರಕರಣಗಳನ್ನು ಪರಿಶೀಲಿಸಿ, ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಹದಾಯಿ ಹಾಗೂ ಉತ್ತರ ಕರ್ನಾಟಕದ ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ರೈತರ ಸಭೆ ನಡೆಸಲು ಚುನಾವಣಾ ಪೂರ್ವದಲ್ಲಿ ಅಥವಾ ಚುನಾವಣೆ ನಂತರ ಸಮಯ ನಿಗದಿಪಡಿಸಲು ಪ್ರಯತ್ನಿಸುತ್ತೇನೆ ಮತ್ತು ಮುಖ್ಯಮಂತ್ರಿಗಳ ಸಮಯಾವಕಾಶ ನೋಡಿಕೊಂಡು ನಾಳೆಯ ನವಲಗುಂದ ಕಾರ್ಯಕ್ರಮದಲ್ಲಿ ರೈತ ಮುಖಂಡರನ್ನು ಭೇಟಿ ಮಾಡಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕಾರ್ಯಕ್ರಮದಲ್ಲಿ ಸ್ಥಳ ಗುರುತಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಶಾಸಕರು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಧಾರವಾಡ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಧಾರವಾಡ ಮಾದರಿ ಜಿಲ್ಲೆ ಆಗಬೇಕು. ಇದಕ್ಕೆ ಧಾರವಾಡ ಜಿಲ್ಲೆಯ ಪ್ರತಿಯೊಬ್ಬರ ಸಹಕಾರ ಬೇಕು ಎಂದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜನ ಜಾನುವಾರು ಮೇವು, ನೀರಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಗೋಶಾಲೆ ಪ್ರಾರಂಭವಾಗಿದೆ. ಜಿಲ್ಲೆಯ 14 ಸ್ಥಳಗಳಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸ್ಥಳ ಗುರುತಿಸಲಾಗಿದೆ. ರೈತರಿಗೆ ಬ್ಯಾಂಕ್‍ಗಳಲ್ಲಿ ಆಗುತ್ತಿರುವ ಒಟಿಎಸ್ ಸಮಸ್ಯೆ ಪರಿಹರಿಸಲು ಲೀಡ್ ಬ್ಯಾಂಕ್ ಮ್ಯಾನೇಜರ್ ಮೂಲಕ ಎಲ್ಲಾ ಬ್ಯಾಂಕ್‍ಗಳಿಗೆ  ನಿರ್ದೇಶನ ನೀಡಲಾಗುವುದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತಂದರೆ, ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್‌ ಅಧಿಕ್ಷಕ ಡಾ. ಗೋಪಾಲ್ ಬ್ಯಾಕೋಡ್ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಟಕಾ, ಜೂಜು ಮತ್ತು ಅನಧಿಕೃತವಾಗಿ ಸರಾಯಿ ಮಾರಾಟ ಮಾಡುವುದನ್ನು ನಿಯಂತ್ರಿಸಲು ಎಲ್ಲ ಪೊಲೀಸ್‌ ಠಾಣೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೊಲೀಸ್ ಬಿಟ್ ವ್ಯವಸ್ಥೆ ಹೆಚ್ಚಿಸಿ, ಚುರುಕುಗೊಳಿಸಲಾಗಿದೆ. ಯಾವುದೇ ಗ್ರಾಮಗಳಲ್ಲಿ ಅಪರಾಧ ಕೃತ್ಯಗಳು, ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ, ಜಿಲ್ಲಾ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಲು ಅವರು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಕೆ.ಸಿ. ಬದ್ರಣ್ಣನವರ, ಕೃಷಿ ಇಲಾಖೆ ಉಪ ನಿರ್ದೇಶಕಿ ಜಯಶ್ರೀ ಹಿರೇಮಠ, ಎಸ್‍ಬಿಐ ವಿಮಾ ಕಂಪನಿಯ ಉಮೇಶ ಕಾಂತಾ, ವಿವಿಧ ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಮತ್ತು ರೈತ ಮುಖಂಡರಾದ ಶಂಕರ ಅಂಬಲಿ, ಲೋಕನಾಥ ಹೆಬಸೂರ, ಶಿವಣ್ಣ ಹೆಬ್ಬಳ್ಳಿ, ವೀರೇಶ ಸೊಬರದಮಠ, ಭಗವಂತಪ್ಪ ಪಟ್ಟಣದ, ದಿವಟೆ ಗೋಪಾಲ, ರಮೇಶ ಕೊರವಿ, ಬಸವರಾಜ ಜೋಗಪ್ಪನವರ, ಹಣಮಂತ ಬೂದಿಹಾಳ, ರಘುನಾಥ ನಡುವಿನಮನಿ, ಮಹೇಶ್ ಕುಲಕರ್ಣಿ, ಮಾಣಿಕ್ಯಮ್ಮ, ಮಲ್ಲಿಕಾರ್ಜುನ ಬಾಳನಗೌಡರ, ಎ.ಪಿ. ಗುರಿಕಾರ, ಸುಭಾಷಚಂದ್ರಗೌಡ ಪಾಟೀಲ ಸೇರಿದಂತೆ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳ ರೈತ ಪ್ರತಿನಿಧಿಗಳು, ಮಹಿಳಾ ರೈತ ಪ್ರತಿನಿಧಿಗಳು ಭಾಗವಹಿಸಿ, ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X