ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ ಗಣೇಶಪೇಟೆಯಿಂದ ಗೋಕುಲ ರಸ್ತೆ ಕಡೆಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.
ಪ್ರಾಣಹಾನಿಯಿಂದ ಬಚಾವ್ ಆಗಿದ್ದು, ಕ್ಷಣಾರ್ಧದಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ಸ್ಥಳೀಯರು ನಂದಿಸಿದ್ದು ಭಾರಿ ಅನಾಹುತ ತಪ್ಪಿದೆ. ಸುರಿಯುವ ಮಳೆಯ ನಡುವೆಯೂ ಇಂಡಿಗೋ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಇದನ್ನು ಓದಿದ್ದೀರಾ? ವಿಶ್ವ ಮಾನಸಿಕ ಆರೋಗ್ಯ ದಿನ | ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ
ಸುರಿಯುತ್ತಿದ್ದ ಮಳೆಯಲ್ಲಿ ಇಂಡಿಗೋ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.