ಭಾರತ ಸರ್ಕಾರದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಧಾರವಾಡ ಜಿಲ್ಲೆಯಲ್ಲಿ ’60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ’ದಲ್ಲಿ ಜಿಲ್ಲೆಯಲ್ಲಿನ 187 ಶಾಲೆಗಳನ್ನು ಮತ್ತು 4 ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಧಾರವಾಡ ತಾಲೂಕಿನ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ಅಗಸನಹಳ್ಳಿ ಮತ್ತು ಶೇಡಬಾಳ, ಉಪ್ಪಿನ ಬೆಟಗೇರಿಯ ಜೀರಿಗಿವಾಡ ಮತ್ತು ದಾಸನಕೊಪ್ಪ ಗ್ರಾಮಗಳನ್ನು ಸಂಪೂರ್ಣವಾಗಿ ತಂಬಾಕು ಮುಕ್ತವೆಂದು ಘೋಷಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಸರ್ಕಾರೇತರ ಸಂಸ್ಥೆಗಳು (ಎನ್‍ಜಿಓ), ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು