ಧಾರವಾಡ | ಮಾನಸಿಕ ಕಿರುಕುಳಕ್ಕೆ ಮನನೊಂದು ಯುವಕ ಆತ್ಮಹತ್ಯೆ

Date:

ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಮನನೊಂದ ಯುವಕನೋರ್ವ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲ್ಲೂಕು ಚಿಕ್ಕನೇರ್ತಿ ಗ್ರಾಮದಲ್ಲಿ ನಡೆದಿದೆ.

- Advertisement -

ಈ ಘಟನೆಗೆ ಕಿರುಕುಳವೇ ಕಾರಣ ಎಂದು ಮೃತನ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು 8 ಮಂದಿ ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಗಂಭೀರ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 23 ವರ್ಷದ ಫಕ್ಕೀರೇಶ ಹನಮಂತಪ್ಪ ತಡಸದ ಮೃತ ಯುವಕ ಎಂದು ಗುರುತಿಸಲಾಗಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ಈ ಯುವಕ, ಅಕ್ಟೋಬರ್ 15 ರಂದು ಮುಂಜಾನೆ 4:00-4:30 ಗಂಟೆಯ ನಡುವಿನ ಸುಮಾರಿಗೆ ತಮ್ಮ ಮನೆಯ ಮೇಲಿನ ಮಹಡಿಗೆ ಹಾಕಿದ ಕಟ್ಟಿಗೆಯ ಕಂಬಿಗೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮೃತ ಯುವಕನ ಅಜ್ಜನ ಆಸ್ತಿಯಲ್ಲಿ ಸುಮಾರು 20 ಎಕರೆ ಪಾಲು ಬೇಕೆಂದು ಕೆಲವರು ಕೋರ್ಟ್‌ ಮೂಲಕ ನೋಟಿಸ್ ಕಳುಹಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. ಅಷ್ಟೇ ಅಲ್ಲದೆ, ಮನೆ ಮತ್ತು ಹಿತ್ತಲಿನಲ್ಲಿ ಪಾಲು ನೀಡಬೇಕೆಂದು ಆಗಾಗ ದೂರವಾಣಿ ಕರೆಗಳ ಮೂಲಕವೂ ತೀವ್ರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಮಾನಸಿಕ ಒತ್ತಡವನ್ನು ಸಹಿಸಲಾಗದ ಫಕ್ಕೀರೇಶ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾನೆ ಎಂದು ಹೇಳಲಾಗಿದೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ರೈತರ ಭೂಮಿ ಕಬಳಿಕೆ ಆರೋಪ; ಅಗತ್ಯ ಕ್ರಮಕ್ಕೆ ಒತ್ತಾಯ

ಆರೋಪಿಗಳು:
ಕಿರಟಗೇರಿಯ ಶಿವುನಗೌಡ ಸಂಕನಗೌಡ್ರ (50) ಮತ್ತು ಅಣ್ಣಪ್ಪ ಸಂಕನಗೌಡ್ರ (46), ಬ್ಯಾಹಟ್ಟಿಯ ಬಸಪ್ಪ ರೋಗಿ (60) ಮತ್ತು ಕಲ್ಲಪ್ಪ ರೋಗಿ (80), ಹುಲ್ಲೂರದ ಮುದಕಪ್ಪ ರಗಟೆ (50) ಮತ್ತು ಶರಣಪ್ಪ ರಗಟ (40), ಮಂಟೂರಿನ ರಾಯಮ್ಮ ಗುಂಜಳ (50) ಹಾಗೂ ಇತರ ಕೆಲವರ ವಿರುದ್ಧ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸ್ ಮೂಲಗಳಿಂದ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...