ಸಾಲ ಪಡೆದುಕೊಂಡಿದ್ದ ಯುವಕನೊಬ್ಬ ಬಡ್ಡಿ ಕಟ್ಟಲಾಗದೆ ಸಾಲ ಕೊಟ್ಟವರ ಕಿರುಕುಳಕ್ಕೆ ಮನನೊಂದು ಧಾರವಾಡದ ಕೆಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಜುನಾಥ ಕಟಗೆಣ್ಣವರ (32) ಮೃತ ಯುವಕನೆಂದು ಗುರುತಿಸಲಾಗಿದ್ದು, ನಗರದ ಚರಂತಿಮಠ ಗಾರ್ಡನ್ ನಿವಾಸಿ ಎಂದು ತಿಳಿದುಬಂದಿದೆ. ಸಾಲ ಕೊಟ್ಟವರ ಕಿರುಕುಳಕ್ಕೆ ಮನನೊಂದು ಕೆಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನು ಓದಿದ್ದೀರಾ? ಧಾರವಾಡ | ಗೌರಿ ಹಂತಕರಿಗೆ ಸನ್ಮಾನ: ಆರೋಪಿಗಳ ಬಂಧನಕ್ಕೆ ಒತ್ತಾಯ
ತೆಗೆದುಕೊಂಡ ಸಾಲಕ್ಕೆ ಬಡ್ಡಿ ಕೊಡುವಂತೆ ಕಿರುಕುಳ ನೀಡಿದ್ದಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.