ಧಾರವಾಡ | ಪಂಪ್‌ಸೆಟ್‌ ಸಬ್ಸಿಡಿ ಪಡೆಯಲು ಆಧಾರ್‌ ಲಿಂಕ್‌ ಕಡ್ಡಾಯ; ರದ್ದತಿಗೆ ರೈತ ಸಂಘ ಆಗ್ರಹ

Date:

ಕೃಷಿ ಮಾಡಲು ಪಂಪ್ ಸೆಟ್ ಬಳಸುವ ರೈತರು ಸಬ್ಸಿಡಿ ಪಡೆಯಲು ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಆರ್‌ಇಸಿ) ಆದೇಶವನ್ನು ರದ್ದುಪಡಿಸ ಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

“ಪಂಪ್‌ಸೆಟ್‌ಗಳಿಗೆ ಆಧಾರ್ ಲಿಂಕ್ ಮಾಡದಿದ್ದರೆ ಉಚಿತ ವಿದ್ಯುತ್ ಪೂರೈಕೆ ನಿಲ್ಲಿಸಲಾಗುವುದು ಎಂದು ಕೆಆರ್‌ಇಸಿ ಆದೇಶದಲ್ಲಿ ರೈತರಿಗೆ ಎಚ್ಚರಿಕೆ ನೀಡಲಾಗಿದೆ. ಹೀಗೆ ಮಾಡಿದರೆ ಕಷ್ಟಪಟ್ಟು ಕೃಷಿ ಮಾಡುತ್ತಿರುವ ಸುಮಾರು 40 ಲಕ್ಷ ರೈತರ ಬದುಕಿಗೆ ತಣ್ಣೀರೆರಚಿದಂತಾಗುತ್ತದೆ” ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರೂ ಆಗಿರುವ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

“ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕೆಆರ್‌ಇಸಿಗೆ ನಿರ್ದೇಶನ ನೀಡಿ, ರದ್ದುಗೊಳಿಸಬೇಕು. ಎಂದು ಒತ್ತಾಯಿಸಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಡಾ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಪ್ರಕಾರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಮತ್ತು ಶಾಸನವನ್ನು ತರಬೇಕು. ಮಾರುಕಟ್ಟೆಯಲ್ಲಿ ಬೆಲೆ ಕುಸಿದಾಗಲೆಲ್ಲಾ ಉತ್ಪನ್ನಗಳನ್ನು ಎಂಎಸ್‌ಪಿಗೆ ಖರೀದಿಸಬೇಕು. ಆಸ್ಪತ್ರೆಗಳು, ವಸತಿ ನಿಲಯಗಳು, ಕಾರಾಗೃಹಗಳು ಮತ್ತು ಅಂಗನವಾಡಿಗಳು ಕೃಷಿ ಉತ್ಪನ್ನಗಳನ್ನು ಕೃಷಿ ಉತ್ಪನ್ನ ಸಂಘಗಳಿಂದ ನೇರವಾಗಿ ಖರೀದಿಸಿ, ಈ ಸಂಘಗಳನ್ನು ಬಲಪಡಿಸಬೇಕು. ಜೊತೆಗೆ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುವಂತೆ ಮಾಡಬೇಕು” ಎಂದು ಒಕ್ಕೂಟವು ಸರ್ಕಾರಕ್ಕೆ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ರದ್ದು; ಕ್ರೀಡಾಪಟುಗಳ ಆಕ್ರೋಶ

“ರೈತರಿಗೆ ಬ್ಯಾಂಕ್ ಸಾಲ ನೀಡುವಾಗ ಕ್ರೆಡಿಟ್ ಇನ್ಫರ್ಮೇಷನ್ ಬ್ಯೂರೋ (ಇಂಡಿಯಾ) ಲಿಮಿಟೆಡ್(ಸಿಬಿಲ್) ಅಂಕವನ್ನು ಪರಿಗಣಿಸುವ ವ್ಯವಸ್ಥೆಯನ್ನು ತೆಗೆದುಹಾಕುವುದು, ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯನ್ನು ರದ್ದುಪಡಿಸುವುದು, ರೈತರು ಅರಣ್ಯ ಭೂಮಿಯಲ್ಲಿ ಬಗರ್ ಹುಕುಂ ಸಾಗುವಳಿಯನ್ನು ಕ್ರಮಬದ್ಧಗೊಳಿಸುವುದು ಮತ್ತು ಕಳಸಾ – ಬಂಡೂರಿ ನಾಲಾ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ರೈತರ ಇತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಶಾಂತಕುಮಾರ್ ಪಟ್ಟಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...