ಧಾರವಾಡ | ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ; ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

Date:

ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕೆಛೇರಿ ಎದುರು ಸರ್ಕಾರಿ ಕಛೇರಿ ಶುದ್ಧೀಕರಣವೆಂದು ಮುಲ್ಲಾ ಮೋಕ್ಷ ಹೋಮ ಪೂಜೆ ಮಾಡಿಸುವ ಮೂಲಕ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.

- Advertisement -

ಈ ವೇಳೆ ಶಾಸಕ ಅರವಿಂದ್ ಬೆಲ್ಲದ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮವನ್ನು ಕಾಂಗ್ರೆಸ್ ಸರಕಾರವು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಕಾರ್ಯಕ್ರಮದ ವೇದಿಕೆಯಲ್ಲಿ ಕುರಾನ್ ಪಠಣ ಮಾಡಿ, ಮುಸ್ಲಿಂ ಸಮುದಾಯದ ಓಲೈಕೆಗಾಗಿ ಅಧಿಕಾರ ದುರುಪಯೋಗ ಮಾಡಿದ ಹಾಗೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾ ಪಂಚಾಯತ ಸಿ.ಇ.ಓ, ಹಾಗೂ ಪಾಲಿಕೆ ಆಯುಕ್ತರು ಶಿಷ್ಟಾಚಾರ ಉಲ್ಲಂಘಿಸಿ ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡಿದ್ದಾರೆ. ಒಂದು ಸಮೂದಾಯಕ್ಕೆ ಸಿಮೀತವಾಗುವ ರೀತಿಯಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದ್ದನ್ನು ಬಿಜೆಪಿಯು ಸಹಿಸಲಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಮೂಲಕ ತಾವು ಈ ಘಟನೆಗೆ ಸಂಭಂದಿಸಿದ ಸರ್ಕಾರವಾಗಲಿ, ಈ ಕಾರ್ಯಕ್ರಮದಲ್ಲಿ ಭಾಗಿಯಾದ ಯಾರೆ ಅಧಿಕಾರಿ ಆಗಲಿ, ಜನಪ್ರತಿನಿಧಿಯಾಗಲಿ ಕೊಡಲೆ ಸೂಕ್ತ ಕ್ರಮ ಕೖಗೊಂಡು, ರಾಜ್ಯದ ಜನರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದರು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗುತ್ತಿಗೆದಾರ ಮೋಹನ್ ಚವ್ಹಾಣ್ ಅಪಹರಣ ಪ್ರಕರಣ; 10 ಜನರ ಬಂಧನ

ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ, ಜಿಲ್ಲಾದ್ಯಕ್ಷ ತಿಪ್ಪಣ ಮಜ್ಜಗಿ, ಇನ್ನಿತರರು ಉಪಸ್ಥಿತರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...