ಧಾರವಾಡ | ವಿದ್ಯಾರ್ಥಿನಿಯರ ಚಿತ್ರಗಳನ್ನು ಅಶ್ಲೀಲವಾಗಿ ತಿರುಚಿದ್ದ ಆರೋಪಿ ಬಂಧನ

Date:

ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯರ ಫೋಟೊಗಳನ್ನು ಎಡಿಟ್‌ ಮಾಡಿ, ಬೇರೊಬ್ಬರ ನಗ್ನ ದೇಹ ಚಿತ್ರಗಳಿಗೆ ಅಂಟಿಸಿ, ಆ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ತಾಲೂಕಿನ ಇಂಗಳಹಳ್ಳಿ ಗ್ರಾಮದ ಹ್ಯಾಕರ್‌ ಕಿರಣ್ ಚವನಗೌಡರ ಮತ್ತು ಆತನ ಸ್ನೇಹಿತ ನವೀನ್ ಅಕ್ಕಿ ಬಂಧಿತ ಆರೋಪಿಗಳು. ಈ ಇಬ್ಬರೂ, ಹುಬ್ಬಳ್ಳಿ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಪೋಟೋಗಳನ್ನು ಡೌನ್‌ಲೋಡ್ ಮಾಡಿಕೊಂಡು, ಅವುಗಳನ್ನು ಎಡಿಟ್ ಮಾಡಿ, ಅಶ್ಲೀಲ ಚಿತ್ರಗಳಿಗೆ ಅಂಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ, ಫೇಸ್‌ಬುಕ್‌ನಲ್ಲಿ ವಿದ್ಯಾರ್ಥಿನಿಯರ ಚಿತ್ರಗಳನ್ನು ಎಡಿಟ್ ಮಾಡಲಾದ ಅಶ್ಲೀಲ ಚಿತ್ರಗಳ ಕಾಣಿಸಿಕೊಂಡಿದ್ದವು. ಆ ಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೊದಲಿಗೆ ವಿದ್ಯಾರ್ಥಿನಿಯರು ಓದುತ್ತಿದ್ದ ಕಾಲೇಜಿನ ವಿದ್ಯಾರ್ಥಿ ರಜನಿಕಾಂತ ತಳವಾರ ಎಂಬಾತನನ್ನು ಸಂಶಯದ ಮೇಲೆ ಬಂಧಿಸಿದ್ದರು. ಅಲ್ಲದೆ, ಹ್ಯಾಕ್‌ ಮಾಡಲಾದ ವಿದ್ಯಾರ್ಥಿನಿಯರ ಇನ್‌ಸ್ಟಾಗ್ರಾಮ್‌ ಖಾತೆ ವಿವರ ಸಂಗ್ರಹಿಸಿ ಪೋಸ್ಟ್‌ನ ಮೂಲದ ಬಗ್ಗೆ ಮಾಹಿತಿ ನೀಡುವಂತೆ ಫೇಸ್‌ಬುಕ್‌ಗೆ ಪತ್ರ ಬರೆದಿದ್ದರು ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೊಲೀಸರ ಪತ್ರಕ್ಕೆ ಫೇಸ್‌ಬುಕ್‌ ಪ್ರತಿಕ್ರಿಯಿಸಿದ್ದು, ಮಾಹಿತಿಗಳನ್ನು ನೀಡಿದೆ. ಮಾಹಿತಿ ಪಡೆದ ಪೊಲೀಸರು ಹ್ಯಾಕರ್‌ ಕಿರಣ್ ಚವನಗೌಡರ ಮತ್ತು ಆತನ ಸ್ನೇಹಿತ ನವೀನ್ ಅಕ್ಕಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯಲ್ಲಿ ತಪ್ಪಿತಸ್ಥ ರಜನಿಕಾಂತನಲ್ಲ, ಈ ಇಬ್ಬರೇ ಎಂಬುದು ಸ್ಪಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...