ಧಾರವಾಡ | ಏಕೀಕರಣ ಚಳುವಳಿಯಲ್ಲಿದ್ದ ಮಹನೀಯರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರು: ರವೀಂದ್ರನಾಥ

Date:

ದೇಶದ ಸ್ವಾತಂತ್ರ್ಯ ಚಳುವಳಿ ಹಾಗೂ ಕರ್ನಾಟಕದ ಏಕೀಕರಣ ಚಳುವಳಿಗಳಲ್ಲಿ ಏಕಕಾಲದಲ್ಲಿ ಭಾಗವಹಿಸಿ, ಸಕ್ರೀಯವಾಗಿ ಪಾಲ್ಗೊಂಡಿದ್ದ ಮಹನೀಯ ಹೋರಾಟಗಾರರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರಾಗಿದ್ದರು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು, ನವಲಗುಂದ ಸರಕಾರಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಅದರಗುಂಚಿ ಶಂಕರಗೌಡರ ದತ್ತಿ’  ಕಾರ್ಯಕ್ರಮದ ಅತಿಥಿಯಾಗಿ ಖ್ಯಾತ ಸಾಂಸ್ಕೃತಿಕ ಚಿಂತಕ ರವೀಂದ್ರನಾಥ ದೊಡ್ಡಮೇಟಿ ಮಾತನಾಡಿದರು.

- Advertisement -

ಸುಭಾಸಚಂದ್ರ ಬೋಸರ ಪ್ರಭಾವಕ್ಕೆ ಒಳಗಾಗಿದ್ದ ಶಂಕರಗೌಡರು, ಮಹಾತ್ಮಾ ಗಾಂಧೀಜಿಯವರ ಒಡನಾಡಿಯೂ ಆಗಿದ್ದರು. ಜೊತೆಗೆ ಅಪ್ಪಟ ದೇಶಭಕ್ತರಾಗಿ, ಸಂತರಾಗಿ, ಶರಣರಾಗಿ, ಹೋರಾಟಗಾರರಾಗಿದ್ದ ಇವರು, ವಿದ್ಯಾದಾನಿಯೂ ಆಗಿದ್ದರು. ಕರ್ನಾಟಕ ಏಕೀಕರಣಕ್ಕಾಗಿಯೇ ‘ಕರ್ನಾಟಕ ಏಕೀಕರಣ ಪರಿಷತ್ತು’  ಸ್ಥಾಪಿಸಿದ್ದರು. ಅದರಗುಂಚಿಯ ಕಲ್ಮೇಶ್ವರ ದೇವಸ್ಥಾನದಲ್ಲಿ ಉಪವಾಸ ಕುಳಿತು ದೇಶದ ಜನತೆಯ ಗಮನವನ್ನು ಸೆಳೆದಿದ್ದರು. ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಇಂತಹ ಮಹಾನ್ ವ್ಯಕ್ತಿಗಳ ನಿಸ್ವಾರ್ಥ ಹೋರಾಟದ ಫಲವಾಗಿಯೇ ಕರ್ನಾಟಕದ ಜನತೆ ಒಂದುಗೂಡಲು ಸಾಧ್ಯವಾಯಿತು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಹಾಗೂ ಅದರಗುಂಚಿ ಶಂಕರಗೌಡರ ಸಹೋದರ ವಿರುಪಾಕ್ಷಿಗೌಡ ಪಾಟೀಲ ಅವರು, ಸುತ್ತಮುತ್ತ ಹಳ್ಳಿಯ ರೈತರನ್ನು ಕಟ್ಟಿಕೊಂಡು, ಚಕ್ಕಡಿಗಳ ಮೆರವಣಿಗೆಯ ಮೂಲಕ ಹೋರಾಟ ಮಾಡಿದ ಶಂಕರಗೌಡರು, ಎಲೆಯ ಮರೆಯ ಕಾಯಿಯಾಗಿದ್ದವರು. ಜನರ ಮನಸ್ಸಿನಲ್ಲಿ ಚಳುವಳಿಗಳ ಕಿಚ್ಚನ್ನು ಹೊತ್ತಿಸಿದವರು. ಅವರು ನಿಷ್ಠುರವಾದಿಯಾಗಿದ್ದರು. ಪ್ರತಿಯೊಂದು ಹೋರಾಟದಲ್ಲೂ ಮುಂಚೂಣಿಯಲ್ಲಿ ಇದ್ದು, ಜಯವನ್ನು ಸಾಧಿಸಿದ ಧೀಮಂತರಾಗಿದ್ದರು. ಅಂತವರ ತ್ಯಾಗದ ಪ್ರತೀಕವಾಗಿ ಸ್ವಾತಂತ್ರ್ಯ ಲಭಿಸಿದ್ದಲ್ಲದೇ ಕರ್ನಾಟಕ ಏಕೀಕರಣವೂ ಸಾಧ್ಯವಾಯಿತು. ಇಂತಹ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಪಠ್ಯಪುಸ್ತಕಗಳಲ್ಲಿ ಸೇರಿಸುವುದರೊಂದಿಗೆ ಅವರ ಪ್ರಭಾವ ವಿದ್ಯಾರ್ಥಿಗಳ ಮೇಲಾಗಬೇಕು ಎಂದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಜಿನದತ್ತ ಅ. ಹಡಗಲಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾತ್ರ ಹಾಗೂ ಇವತ್ತು ಅದು ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತ ಮುನ್ನಡೆದಿರುವ ವಿವರ ನೀಡಿದರು.

ಇದನ್ನೂ ಓದಿ ಧಾರವಾಡ | ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ: ಮಹಾದೇವ ಹಡಪದ

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾ. ಎಂ. ಬಿ. ಬಾಗಡಿ, ಅವರು ಪ್ರತಿಯೊಬ್ಬ ಕನ್ನಡಿಗರೂ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುವುದರೊಂದಿಗೆ ಕನ್ನಡ ನಾಡು-ನುಡಿ ಹಾಗೂ ದೇಶದ ಬಗ್ಗೆ ಗೌರವದ ಭಾವನೆ ಹೊಂದಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದತ್ತಿದಾನಿ ಡಾ. ರಾಮು ಮೂಲಗಿ, ಗೌಡಪ್ಪಗೌಡ ಪಾಟೀಲ, ಎ.ಬಿ. ಕೊಪ್ಪದ, ಎಸ್.ಜಿ. ಹಿರೇಮಠ ಉಪಸ್ತಿತರಿದ್ದರು. ಕು. ಸಂಜನಾ ಗಣಾಚಾರಿ ಪ್ರಾರ್ಥನೆ ಗೀತೆ ಹಾಡಿದರು. ಬಿ.ವಿ. ಏಣಗಿ ವಂದಿಸಿದರು. ಡಾ. ಆಯ್.ಬಿ. ಸಾತಿಹಾಳ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...