ಧಾರವಾಡ | ಎಸ್‌ಟಿ ಪಟ್ಟಿಯಲ್ಲಿ ಬೇರೆ ಜಾತಿ ಸೇರಿಸಿದರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ: ರಾಜು ದೊಡ್ಡಶಂಕರ

Date:

ಈಗಾಗಲೇ ಎಸ್.ಟಿ. ಪಟ್ಟಿಯಲ್ಲಿ 51 ಜಾತಿಗಳಿವೆ. ವಾಲ್ಮೀಕಿ ಸಮುದಾಯದ ಜನಸಂಖ್ಯೆ 40 ಲಕ್ಷಕ್ಕೂ ಹೆಚ್ಚಿದ್ದು, ಬೇರೆ ಜಾತಿ ಸೇರಿಸಿದರೆ ನಮಗೆ ಅನ್ಯಾಯವಾಗುತ್ತದೆ ಎಂದು ಎಸ್.ಟಿ. ಸಮಾಜದ ತಾಲೂಕಾಧ್ಯಕ್ಷ ರಾಜು ದೊಡ್ಡಶಂಕರ ಪರಿಶಿಷ್ಟ ಪಂಗಡ (ಎಸ್‌ಟಿ)ದ ಪಟ್ಟಿಗೆ ಕುರುಬ ಹಾಗೂ ಇತರೆ ಸಮಾಜಗಳನ್ನು ಸೇರಿಸಲು ರಾಜ್ಯ ಸರ್ಕಾರ ನಡೆಸುತ್ತಿರುವ ಹುನ್ನಾರ ಮತ್ತು ನಕಲಿ ಜಾತಿ ಪ್ರಮಾಣ ಪತ್ರ ವಿತರಣೆಯನ್ನು ವಿರೋಧಿಸಿ ಅಖೀಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಕುಂದಗೋಳದಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

- Advertisement -

ಪಟ್ಟಣದ ಗಾಳಿ ಮರೇಮ್ಮ ದೇವಸ್ಥಾನದಿಂದ ತಹಶಿಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬೇರೆ ಸಮುದಾಯಗಳ ಸೇರ್ಪಡೆಯಿಂದ ಮೂಲ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶಿಲ್ದಾರ್ ರಾಜು ಮಾವರಕರರಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಅವರು ಮಾತನಾಡುತ್ತಾ, ನಮ್ಮ ಶಾಸಕರು ಮತ್ತು ಸಚಿವರು ಸಮಾಜಕ್ಕೆ ಅನ್ಯಾಯವಾದಾಗ ಮಾತನಾಡುತ್ತಿಲ್ಲ. ನಮ್ಮ ಬೇಡಿಕೆ ಈಡೇರಿಸದಿದ್ದರೆ, ರಾಜನಹಳ್ಳಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳ ಸಮ್ಮುಖದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬಸವರಾಜ ನಾಯ್ಕರ ಮಾತನಾಡಿ, ಮೀಸಲಾತಿ ಹೆಚ್ಚಳಕ್ಕಾಗಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ನಡೆಸಿದ್ದ ಪಾದಯಾತ್ರೆ ಫಲಕ್ಕೆ ಈಗಿನ ಸರ್ಕಾರ ಧಕ್ಕೆ ತರುತ್ತಿದೆ. ಸರ್ಕಾರ ಬೇರೆ ಸಮುದಾಯಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸಲು ಮುಂದಾಗಿರುವುದು ಸರಿಯಲ್ಲ. ನಮ್ಮ ಜೊತೆಗೆ ಇಲ್ಲ ಸಲ್ಲದವರನ್ನು ಸೇರಿಸಿ ಮೀಸಲಾತಿ ನೀಡಲು ಹೊರಟಿರುವ ಸರ್ಕಾರಕ್ಕೆ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜುಬಲಿ ವೃತ್ತದಲ್ಲಿ ಪ್ರತಿಭಟನೆ

ಈ ಸಂದರ್ಭದಲ್ಲಿ ರವಿ ದೊಡ್ಮನಿ, ಈರಣ್ಣ ಗೌಡನಾಯ್ಕರ, ಅರ್ಜುನ್ ತಳವಾರ, ಶಿದ್ದಲಿಂಗಪ್ಪ ಕರಿಯಮ್ಮನವರ, ಶಂಕರಣ್ಣ ಹಿತ್ತಲಮನಿ, ಬಸವರಾಜ ಗೋವಿಂದಪ್ಪನವರ, ಸುಭಾಷ ಮುತಗಿ, ಮಂಜು ಹುಡೇದ, ಶೇಖರ ತಳವಾರ, ಶೇಖಣ್ಣ ಗುಂಜಳ, ಮಂಜುನಾಥ ಇಚ್ಚಂಗಿ, ನಾರಾಯಣ ಕುರಹಟ್ಟಿ, ಯಲ್ಲಪ್ಪ ಬಾರಕೇರ, ರಾಘವೇಂದ್ರ ನಾಯ್ಕರ, ಮತ್ತಿತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...