ಧಾರವಾಡ | ಐದಾರು ವರ್ಷಗಳ ನಂತರ ಒದಗಿ ಬಂದಿತು ಹರಿಜನಕೇರಿಗೆ ವಿದ್ಯುತ್ ಕಂಬಗಳ ಭಾಗ್ಯ

Date:

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಐದಾರು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ಬಲಿಯಾಗಿ ಬಲಹೀನರಾಗಿ ಬದುಕುತ್ತಿದ್ದು, ಇದೀಗ ಹರಿಜನ‌ಕೇರಿಗೆ ಬರಬೇಕಿದ್ದ ವಿದ್ಯುತ್ ಕಂಬಗಳ ತಡೆಗೂ ಸ್ಥಳಿಯರು ಮುಂದಾಗಿದ್ದರು. ಆ ಹಿನ್ನಲೆಯಲ್ಲಿ ಮಾರ್ಚ್ 24ರಂದು ಗ್ರಾಮೀಣ ಅಭಿವೃದ್ಧಿ ಅಧಿಕಾರಿ, ಹೆಸ್ಕಾಂ ಅಧಿಕಾರಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಭೆಯನ್ನು ಕರೆಯಲಾಗಿತ್ತು.

- Advertisement -

ಸಭೆಯಲ್ಲಿ ಪರಿಶಿಷ್ಠ ಸಮುದಾಯದವರು ಮಾತನಾಡಿ, ತಮಗೆ ಉಳ್ಳವರಿಂದ ಆಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿದರು. ಸರ್ಕಾರಿ ಗಾಂವಠಾಣ ಜಾಗೆಯನ್ನು ಕ್ರಮೇಣ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನಾವು ಧ್ವನಿಯೆತ್ತಲು ಹಣವಿದ್ದವರಲ್ಲ ಹಾಗೂ ಹೆಚ್ಚು ಜನಸಂಖ್ಯೆಯೂ ಇಲ್ಲ ತುಳಿತಕ್ಕೆ ಒಳಗಾದ ಸಮುದಾಯದವರು ನಾವು ಎಂದರು. ಇನ್ನು ವಿದ್ಯುತ್ ಕಂಬಗಳನ್ನು ಹಾಕಲು ತಕರಾರು ಮಾಡಿದ್ದ, ನಾಲ್ಕೈದು ಗೌಡರ ಮನೆತನದವರು ತಾವು ಜಾಗೆಯನ್ನು ದುಡ್ಡು ಕೊಟ್ಟು ಖರೀದಿ ಮಾಡಿಕೊಂಡಿದ್ದೇವೆ. ಇವರಿಗೇಕೆ ಪುಕ್ಕಟ್ಟೆಯಾಗಿ ಕೊಡಬೇಕು ಎಂದು ಮಾತಿನ ಚಕಮಕಿಗಳು ನಡೆದ ನಂತರ ಎಲ್ಲರೂ ಎಲ್ಲರೊಂದಿಗೆ ಸಹಕರಿಸಿರಿ ಎಂದು ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳು ತಿಳಿಹೇಳಿದಾಗ; ಎಸ್ ಸಿ ಓಣಿಯಲ್ಲಿ‌ ವಿದ್ಯುತ್ ಕಂಬಗಳನ್ನು ಹಾಕಲು ಅನುಮತಿಗೆ ಸಮ್ಮತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸಂದರ್ಭದಲ್ಲಿ ಹೆಸ್ಕಾಂ ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳು, ಊರಿನ ಹಿರಿಯರು, ಯುವಕರು, ಮಹಿಳೆಯರು, ಸ್ಥಳಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...