ಧಾರವಾಡ | ಜಾನುವಾರು ಹರಾಜು ಕರೆದ ಕೃಷಿ ವಿವಿ; ಬಜರಂಗದಳದ ವಿರೋಧ

Date:

ಧಾರವಾಡ ಕೃಷಿ ವಿಶ್ವವಿದ್ಯಾಲಯ ತನ್ನ ಹೈನುಗಾರಿಕಾ ಘಟಕದಲ್ಲಿ ಹೆಚ್ಚುವರಿಯಾಗಿರುವ 56 ಜಾನುವಾರುಗಳನ್ನು ಇದೇ ನವೆಂಬರ್ 6ರಂದು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲು ಮುಂದಾಗಿದೆ. ಆದರೆ, ಈ ಹರಾಜು ಪ್ರಕ್ರಿಯೆಗೆ ಬಜರಂಗ ದಳ ವಿರೋಧ ವ್ಯಕ್ತಪಡಿಸಿದೆ.

- Advertisement -

ರಾಜ್ಯದಲ್ಲಿಯೇ ಮೇಲ್ದರ್ಜೆಯಲ್ಲಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಶೋಧನೆಯ ಜೊತೆಗೆ ಕೃಷಿ ಉಪ ಕಸುಬುಗಳಲ್ಲಿಯೂ ತೊಡಗಿಸಿಕೊಂಡಿದೆ. ಅದರಲ್ಲಿ ಹೈನುಗಾರಿಕೆ ಘಟಕ ಪ್ರಮುಖವಾಗಿದೆ. ಧಾರವಾಡಿ ಎಮ್ಮೆ ತಳಿ ಸೇರಿ ವಿವಿಧ ತಳಿಯ ರಾಸು ಹಾಗೂ ಹಲವು ಬಗೆಯ ನೂರಾರು ಜಾನುವಾರುಗಳು ಇಲ್ಲಿವೆ. ಆ ಪೈಕಿ ಹೆಚ್ಚುವರಿ ಜಾನುವಾರುಗಳ ಹರಾಜಿಗೆ ಕೃಷಿ ವಿವಿ ಮುಂದಾಗಿತ್ತು. ಈ ಸಂಬಂಧ ಜಾಹೀರಾತು ಪ್ರಕಟಣೆ ಕೂಡ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆದರೆ, ಇಲ್ಲಿ ಜಾನುವಾರುಗಳು ಹರಾಜಿನ ಮೂಲಕ‌ ಕಸಾಯಿಖಾನೆ ಸೇರುತ್ತವೆ. ಹೀಗಾಗಿ ಈ ಹರಾಜು ಯಾವುದೇ ಕಾರಣಕ್ಕೂ ನಡೆಯಬಾರದು ಎಂದು ಬಜರಂಗದಳ ಆಕ್ಷೇಪಿಸಿದೆ. ವಿವಿಗೆ ಈ ಜಾನುವಾರುಗಳು ಹೆಚ್ಚುವರಿ ಆಗಿದ್ದು, ಪಾಲನೆ ಮಾಡುವುದಕ್ಕೆ ಆಗದೇ ಹೋದಲ್ಲಿ ಸರ್ಕಾರಿ ಗೋಶಾಲೆಗಳಿಗೆ ನೀಡಲಿ. ಈ ಕೂಡಲೇ ಹರಾಜು ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕೃಷಿ ವಿವಿ ಕುಲಪತಿಗೆ ಬಜರಂಗದಳ ಮನವಿ ಸಲ್ಲಿಸಿದೆ.

ಆದರೆ, ಕೃಷಿ ವಿವಿ ಸದ್ಯ ನಡೆಯಲಿರುವ ಹರಾಜಿನಲ್ಲಿ ರೈತರು ಮತ್ತು ಹಾಲು ಉತ್ಪಾದಕರೇ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎನ್ನುವ ನಿಯಮವನ್ನು ಹಾಕಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರ ಇಲ್ಲವೇ, ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯರಾಗಿದ್ದಲ್ಲಿ ಸದಸ್ಯತ್ವದ ಪ್ರಮಾಣ ಪತ್ರ ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಇಷ್ಟಾದರೂ ಭಜರಂಗದಳ ಹರಾಜು ಪ್ರಕ್ರಿಯೆ ನಡೆಸದಂತೆ ಆಕ್ಷೇಪಿಸಿದೆ. ಒಂದು ವೇಳೆ ಹರಾಜು ಹಾಕಿದರೆ ನಾವು ಮುತ್ತಿಗೆ ಹಾಕಿ ತಡೆಯುತ್ತೇವೆ ಎಂದು ಬಜರಂಗದಳ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...