ಧಾರವಾಡ | ರೈಲ್ವೆ ಖಾಸಗೀಕರಣ ಸ್ಥಗಿತಕ್ಕೆ ಎಐಡಿಐಒ ಆಗ್ರಹ

Date:

ರೈಲ್ವೆ ಖಾಸಗೀಕರಣ ಪ್ರಯಾಣಿಕರನ್ನು ಬೆಂಕಿಗೆ ತಳ್ಳಿದೆ. ಕೋಟ್ಯಂತರ ವಿದ್ಯಾವಂತ ಯುವಜನರು ನಿರುದ್ಯೋಗಿಗಳಾಗಿರುವಾಗ, ಕೇಂದ್ರ ಸರ್ಕಾರವು ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಮತ್ತು ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಏಕೆ ಹಿಂಜರಿಯುತ್ತಿದೆ ಎಂದು ಎಐಡಿಐಒ ಧಾರವಾಡ ಜಿಲ್ಲಾ ಸಮಿತಿ ಪ್ರಶ್ನಿಸಿದೆ.

- Advertisement -

ರೈಲ್ವೆ ಖಾಸಗೀಕರಣ ನಿಲ್ಲಿಸುವಂತೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಐಡಿಐಒ ಧಾರವಾಡ ಜಿಲ್ಲಾ ಸಮಿತಿಯಿಂದ ಆಗಸ್ಟ್ 10ರಂದು ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಭಾರತೀಯ ರೈಲ್ವೆಯು ಸಂಪೂರ್ಣ ವಿನಾಶದತ್ತ ಸಾಗುತ್ತಿದೆ. ಜನಸಾಮಾನ್ಯರ ಬೃಹತ್ ಪ್ರಮಾಣದ ತೆರಿಗೆ ಹಣದಿಂದ ಕಟ್ಟಲಾದ ಭಾರತೀಯ ರೈಲ್ವೆಯನ್ನು ದುರ್ಬಲಗೊಳಿಸಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕೈಗೊಂಡ ಕ್ರಮಗಳಿಂದ ಪ್ರತಿ ವರ್ಷವೂ ಇದು ತೀವ್ರಗೊಳ್ಳುತ್ತಿದೆ. ಖಾಸಗೀಕರಣ ಮತ್ತು ವ್ಯಾಪಾರೀಕರಣದ ಕ್ರಮಗಳು ರೈಲ್ವೆ ಪ್ರಯಾಣಿಕರನ್ನು ಬಾಣಲೆಯಿಂದ ಬೆಂಕಿಗೆ ತಳ್ಳಿವೆ” ಎಂದು ಸಂಘಟಕರು ತಿಳಿಸಿದರು.

“ರೈಲ್ವೆಯಲ್ಲಿ 3.5 ಲಕ್ಷ ಮಂದಿ ಸಿಬ್ಬಂದಿ ಕೊರತೆಯಿದೆ. ಜೂನ್ 2023ರ ಅಂಕಿಅಂಶಗಳ ಪ್ರಕಾರ ಸುರಕ್ಷತಾ ವಿಭಾಗಗಳಲ್ಲೇ 1.7 ಲಕ್ಷ ಹುದ್ದೆಗಳು ಖಾಲಿ ಇವೆ. ಮೆಕ್ಯಾನಿಕ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ 1.57 ಲಕ್ಷ ಹುದ್ದೆಗಳು ಖಾಲಿ ಇವೆ. 2019ರಿಂದ 2023ರವರೆಗೆ ಒಟ್ಟು 162 ರೈಲು ಅಪಘಾತಗಳು, 118 ಹಳಿತಪ್ಪುವಿಕೆಗಳು ಮತ್ತು 16 ಒಂದಕ್ಕೊಂದು ಡಿಕ್ಕಿ ಅಪಘಾತಗಳು ಸಂಭವಿಸಿವೆ” ಎಂದರು.

“ಕೋಟ್ಯಂತರ ವಿದ್ಯಾವಂತ ಯುವಜನರು ನಿರುದ್ಯೋಗಿಗಳಾಗಿರುವಾಗ, ಕೇಂದ್ರ ಸರ್ಕಾರವು ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಮತ್ತು ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಏಕೆ ಹಿಂಜರಿಯುತ್ತಿದೆ?” ಎಂದರು.

“ಉಲ್ಬಣಗೊಳ್ಳುತ್ತಿರುವ ನಿರುದ್ಯೋಗದಿಂದಾಗಿ, ದೇಶದ ಮೂಲೆ ಮೂಲೆಗಳಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ. ವಲಸೆ ಕಾರ್ಮಿಕರು, ಅಂಗಡಿಗಳು, ಹೋಟೆಲ್‌ಗಳು, ಸಣ್ಣ ಕಾರ್ಖಾನೆಗಳು ಮತ್ತು ಕೃಷಿಯಲ್ಲಿಯೂ ಕೂಡಾ ಅವರನ್ನು ಹಗ್ಗದ ಕೂಲಿ ಕಾರ್ಮಿಕರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ. ಇಂತಹ ವಲಸೆ ಕಾರ್ಮಿಕರೇ ಇಂದು ದೂರ ಪ್ರಯಾಣದ ರೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸುಗಮ ಸಂಚಾರಕ್ಕೆ ಜೆಸಿಬಿ ಕಾರ್ಯಾಚರಣೆ; ಅಂಗಡಿಗಳ ತೆರವು

“ಭಾರತೀಯ ರೈಲ್ವೆಯ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ನಿಲ್ಲಿಸಬೇಕು. ಎಲ್ಲ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ಮತ್ತು ರೈಲ್ವೆ ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಬೇಕು. ರೈಲುಗಳಲ್ಲಿ ಕಾಯ್ದಿರಿಸದ ಮತ್ತು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚ್‌ಗಳನ್ನು ಹೆಚ್ಚಿಸಬೇಕು. ತತ್ಕಾಲ್ ಪ್ರೀಮಿಯಂ ಸುಲಿಗೆಯನ್ನು ಕೊನೆಗೊಳಿಸಬೇಕು. ಟಿಕೆಟ್‌ಗಳ ಮೇಲಿನ ರದ್ದತಿ ಶುಲ್ಕಗಳನ್ನು ತೆಗೆದುಹಾಕಬೇಕು” ಎಂದು ಆಗ್ರಹಿಸಿದರು.

ಭವಾನಿ ಶಂಕರ್ ಗೌಡ, ರಣಜಿತ್ ಧೂಪದ, ಪ್ರೀತಿ ಸಿಂಗಾಡಿ, ಸಿಮೋನ್ ಸೂರ್ಯವಂಶಿ, ಮಹೇಶ್, ಮಂಜುನಾಥ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...