ಧಾರವಾಡ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಎಮ್ಎಸ್ಎಸ್ ಮನವಿ

Date:

Advertisements

ಧಾರವಾಡದ ಏಕೈಕ ಸರ್ಕಾರಿ ಮಹಿಳಾ ಪದವಿ ಕಾಲೇಜಗೆ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಮತ್ತು ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್ಎಸ್ಎಸ್) ಜಿಲ್ಲಾ ಸಮಿತಿ ಸುವರ್ಣ ಸೌಧದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ಗೆ ಮನವಿ ಸಲ್ಲಿಸಿದೆ.

ಎಐಎಮ್ಎಸ್ಎಸ್ ಸಂಘಟಿಸುತ್ತಿರುವ 7ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನದ ಹಿನ್ನಲೆಯಲ್ಲಿ, ಸಚಿವ ಸಂತೋಷ್ ಲಾಡ್‌ಗೆ ಕೆಲವು ಮಹಿಳಾ ಸಂಬಂಧಿ ಹಕ್ಕೊತ್ತಾಯಗಳನ್ನು ಅಧಿವೇಶನದಲ್ಲಿ ಮಂಡಿಸಿ, ಅವುಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಎಐಎಂಎಸ್‌ಎಸ್ ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ ಶ್ರಮಿಸುತ್ತಿದೆ. ಭಾರತ ಸ್ವತಂತ್ರವಾಗಿ 76 ವರ್ಷಗಳು ಕಳೆದ ಮೇಲೂ ಮಹಿಳೆಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಾದ ವರದಕ್ಷಿಣೆ, ಅತ್ಯಾಚಾರ-ಗುಂಪು ಅತ್ಯಾಚಾರ-ಲೈಂಗಿಕ ದೌರ್ಜನ್ಯಗಳು, ಅಪೌಷ್ಟಿಕತೆ, ಅಭದ್ರತೆ, ಸ್ತ್ರೀ ಭ್ರೂಣ ಹತ್ಯೆ ಹಾಗೂ ಲಿಂಗ ತಾರತಮ್ಯ, ಉದ್ಯೋಗಸ್ಥ ಮಹಿಳೆಯರ ಸಂಕಷ್ಟಗಳ ವಿರುದ್ಧ ಹೋರಾಟಗಳನ್ನು ಸಂಘಟಿಸುತ್ತಿದೆ.

Advertisements

ಇದಲ್ಲದೆ, ಎಲ್ಲಾ ಸ್ತರದ ಮಹಿಳೆಯರು ಮತ್ತು ಎಳೆಯರ ನಡುವೆ ಜಾಗೃತಿಯನ್ನು ಮೂಡಿಸುತ್ತಿದೆ. ಹಾಗೆಯೇ ಸ್ವತಂತ್ರ ಭಾರತದ ಕನಸು ಕಂಡಿದ್ದ ನವೋದಯದ ಹರಿಕಾರರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ವಿಚಾರಗಳು ಮತ್ತು ಅವರ ಆಶಯಗಳನ್ನು ಎತ್ತಿ ಹಿಡಿಯುತ್ತಾ ನಿರಂತರವಾಗಿ ವೈವಿಧ್ಯಮಯ ಚಟುವಟಿಕೆಗಳನ್ನು ಸಂಘಟಿಸುತ್ತ ಸಮಾಜದ ಪ್ರಗತಿಗಾಗಿ ಶ್ರಮಿಸುತ್ತಿದೆ.

ಅಶ್ಲೀಲತೆ-ಕ್ರೌರ್ಯ ತುಂಬಿರುವ ಸಿನಿಮಾ-ಜಾಹೀರಾತುಗಳು, ಪೋರ್ನ್ ವೆಬ್ ಸೈಟ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿನ ಶಾರ್ಟ್ಸ್-ರೀಲ್ ಗಳು, ಮದ್ಯ- ಮಾದಕ ವಸ್ತುಗಳು ಯುವ ಜನತೆಯನ್ನು ದಾರಿ ತಪ್ಪಿಸಿದೆ. ಸಮಾಜದಲ್ಲಿ ಅಪರಾಧಗಳು ಹೆಚ್ಚುವಂತೆ ಪ್ರೇರೇಪಿಸಿವೆ. ಸಾಮಾಜಿಕ ವಾತಾವರಣದಲ್ಲಿ ಮೌಲ್ಯಗಳ ಕುಸಿತವನ್ನು ಕಾಣುತ್ತಿದ್ದೇವೆ. ಇವೆಲ್ಲವೂ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿವೆ.

ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರವು ಸ್ಪಂದಿಸಬೇಕಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬೇಕಿದೆ. ಹೀಗಾಗಿ ಮೇಲೆ ಪ್ರಸ್ತಾಪಿಸಿರುವ ಹಲವಾರು ಸಮಸ್ಯೆಗಳ ಕುರಿತು ರಾಜ್ಯದ ಮಹಿಳೆಯರ ಧ್ವನಿಯಾಗಿ ಎಐಎಮ್ಎಸ್ಎಸ್ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದರ ಮೂಲಕ ಪರಿಹಾರವನ್ನು ನಿರೀಕ್ಷಿಸುತ್ತದೆ ಹಾಗೂ ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಐಎಂಎಸ್ಎಸ್ ತನ್ನ 7ನೇ ರಾಜ್ಯಮಟ್ಟದ ಸಮ್ಮೇಳನವನ್ನು ದಾವಣಗೆರೆಯಲ್ಲಿ 2024 ಜನವರಿ 6 ಮತ್ತು 7ರಂದು ಹಮ್ಮಿಕೊಂಡಿದೆ. ಎಂದು ಸಚಿವರ ಗಮನಕ್ಕೆ ತಂದರು.

ಜೊತೆಗೆ ಧಾರವಾಡದ ನಗರ ಪ್ರದೇಶದಲ್ಲಿರುವ ಜಿಲ್ಲೆಯ ಏಕೈಕ ಸರ್ಕಾರಿ ಮಹಿಳಾ ಪದವಿ ಕಾಲೇಜು ಸುಸಜ್ಜಿತ ಹಾಗೂ ಸಮರ್ಪಕ ಸ್ವಂತ ಕಟ್ಟಡವಿಲ್ಲದೇ, ಸಾಕಷ್ಟು ಸಮಸ್ಯೆಗಳ ಆಗರವಾಗಿದೆ. ಹಳೆಯ ಸೋರುವ ಕಟ್ಟಡದಲ್ಲಿ ನೂರಾರು ವಿದ್ಯಾರ್ಥೀನಿಯರು ಪಾಠ ಕೇಳುವಂತಾಗಿದೆ. ಕೊರೋನಾ ನಂತರ ಕಾಲೇಜಿನ ಅಡ್ಮಿಷನ್ ಕೂಡಾ ಹೆಚ್ಚಾಗಿದೆ. ಆದರೆ ಅಲ್ಲಿನ ವಿದ್ಯಾರ್ಥಿನಿಯರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಹಿಂದೆ ವಿದ್ಯಾರ್ಥಿನಿಯರ ಹೊರಾಟದ ಫಲವಾಗಿ ಸ್ವಂತ ನಿವೇಶನ ಕಾಲೇಜಿಗೆ ದೊರಕಿದೆ. ಆದರೆ, ಆ ಜಾಗದಲ್ಲಿ ಅನುದಾನದ ಕೊರತೆಯಿಂದಾಗಿ ಹೊಸ ಕಟ್ಟಡ ನಿರ್ಮಾಣಕ್ಕೆ ಇಲ್ಲಿಯವರೆಗೂ ಚಾಲನೆ ದೊರತಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರಾದ ತಾವು ಆದಷ್ಟು ಬೇಗನೇ ಸೂಕ್ತ ಕಟ್ಟಡ ನಿರ್ಮಾಣಕ್ಕೆ ಬೇಕಾದ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ಎಐಎಮ್ಎಸ್ಎಸ್ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಮಧುಲತಾ ಗೌಡರ್, ಜಿಲ್ಲಾ ಉಪಾಧ್ಯಕ್ಷರಾದ ದೇವಮ್ಮ ದೇವತ್ಕಲ್, ಸದಸ್ಯರಾದ ಮಂಗಳ ಉಪಸ್ಥಿತರಿದ್ದರು.

ಹಕ್ಕೊತ್ತಾಯಗಳು

  1. ಮಹಿಳೆಯರ ಮತ್ತು ಹೆಣ್ಣುಮಕ್ಕಳ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಿ.
  2. ಎಲ್ಲಾ ಮಹಿಳೆಯರಿಗೆ ಶಿಕ್ಷಣ ಮತ್ತು ಆರೋಗ್ಯವನ್ನು ಖಾತ್ರಿಪಡಿಸಿ.
  3. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜುಗಳನ್ನು ತೆರೆಯಿರಿ.
  4. ಅತ್ಯಾಚಾರಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಿ.
  5. ಅಶ್ಲೀಲ ಸಿನಿಮಾ- ಸಾಹಿತ್ಯ-ಜಾಹೀರಾತು- ವೆಬ್ಟ್‌ಸೈಟ್‌ ಹಾಗೂ ಮದ್ಯ-ಮಾದಕ ವಸ್ತುಗಳನ್ನು ನಿಷೇಧಿಸಿ.
  6. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಖಾಸಗಿಕರಣ ನಿಲ್ಲಲಿ.
  7. ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿ.
  8. ಶುಚಿ ಯೋಜನೆಯನ್ನು ಜಾರಿಗೊಳಿಸಿ.
  9. ಮಹಿಳೆಯರ ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ.
  10. ವಿದ್ಯಾರ್ಥಿನಿಯರಲ್ಲಿನ ಅಪೌಷ್ಟಿಕತೆಯನ್ನು ತಡೆಗಟ್ಟಲು ಕಾಲೇಜು ಹಂತದವರೆಗೂ ಬಿಸಿಯೂಟ ಒದಗಿಸಿ.
  11. ಸರ್ಕಾರದ ಸ್ಕೀಮ್ ಅಡಿ ದುಡಿಯುವ ಮಹಿಳಾ ಕಾರ್ಮಿಕರಿಗೆ ಕನಿಷ್ಠ ವೇತನ 25 ಸಾವಿರ ಒದಗಿಸಿ.
  12. ಧಾರವಾಡದ ಸರ್ಕಾರಿ ಮಹಿಳಾ ಪದವಿ ಕಾಲೇಜ್‌ಗೆ ಸಮರ್ಪಕ ಕಟ್ಟಡ ನಿರ್ಮಿಸಿಕೊಡಿ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X