ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಆಕ್ರೋಶ ವ್ಯಕ್ತಪಡಿಸಿದೆ.
ಧಾರವಾಡ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಡಿವಿಪಿ ಕಾರ್ಯಕರ್ತರು, “ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.
ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಮೌನೇಶ್ ಜಾಲವಾಡಗಿ, “ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಸರಿಯಲ್ಲ. ಎಸ್‌ಸಿ/ಎಸ್‌ಟಿ ಅನುದಾನವನ್ನು ಅದೇ ಸಮುದಾಯಗಳ ಅಭಿವೃದ್ಧಿಗೆ ಮಾತ್ರವೇ ಬಳಸಬೇಕು” ಎಂದು ಆಗ್ರಹಿಸಿದ್ದಾರೆ.
ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಖಳೆ ಪರಿಷತ್ ಅಧ್ಯಕ್ಷ ಹನುಮಂತ ದಾಸರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಾಸಟ್ಟಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದುರ್ಗಾ ಎಚ್. ಬಸವರಾಜ ಎಚ್ ಹಾಗೂ ಮಲ್ಲು ಚಲವಾದಿ ಇದ್ದರು.