ಧಾರವಾಡ | ಅಂಜಲಿ ಹತ್ಯೆ ಪ್ರಕರಣ; ಡಿಸಿಪಿ ಅಮಾನತು

Date:

ಕೆಲ ದಿನಗಳಲ್ಲೇ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಹತ್ಯೆ ಪ್ರಕರಣಗಳು ನಡೆದಿದ್ದು, ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ.

ಈ ಹಿಂದೆ ನೇಹಾ ಹಿರೇಮಠ್ ಎಂಬ ಯುವತಿಯ ಹತ್ಯೆ ನಡೆದಿತ್ತು. ಇದಾದ ಕೆಲವೇ ದಿನಗಳಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿ ಕೊಲೆಯಾಗಿದೆ. ಪ್ರೀತಿಸುವಂತೆ ಪೀಡಿಸುತ್ತಿದ್ದ ಗಿರೀಶ್ ಎಂಬಾತ ಆಕೆಯ ಮನೆಗೆ ನುಗ್ಗಿ ಆಕೆಯನ್ನು ಹತ್ಯೆ ಮಾಡಿದ್ದಾನೆ.

ಭೀಕರ ಕೊಲೆಗಳಿಂದಾಗಿ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿನ ಲೋಪದ ಮೇಲೆ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ, ಹೆಡ್​ಕಾನ್ಸ್​ಟೇಬಲ್ ರೇಖಾ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ, ಡಿಸಿಪಿ ರಾಜೀವ್ ಅವರನ್ನೂ ಅಮಾನತು ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಂಜಲಿ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಪಿ ಗಿರೀಶ್‌ ತಾಯಿ, “ಇಂತಹ ಪಾಪಿ ಮಕ್ಕಳು ಯಾರಿಗೂ ಬೇಡ. ನ್ಯಾಯಾಲಯ ಅವನಿಗೆ ಶಿಕ್ಷೆ ಕೊಡಬೇಕು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24...

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...