“ಜನಸಂಖ್ಯಾ ಅಧ್ಯಯನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳಿವೆ. ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಿ, ದೇಶದ ಏಳಿಗೆಗೆ ಕೈಜೋಡಿಸಬೇಕು” ಎಂದು ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಂ.ಎನ್.ಮೆಗೇರಿ ಹೇಳಿದರು.
ಧಾರವಾಡ ನಗರದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಸಂಖ್ಯಾಶಾಸ್ತ್ರ ವಿಭಾಗ ಏರ್ಪಡಿಸಿದ ಜನಸಂಖ್ಯಾ ಅಧ್ಯಯನದಲ್ಲಿ ವೃತ್ತಿ ಅವಕಾಶಗಳು ಎಂಬ ಶೀರ್ಷಿಕೆ ಅಡಿಯಲ್ಲಿ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.
ವಿನ್ಯಾಸ ಸಂಗ್ರಹಿಸಲು, ಪರಿಶೀಲಿಸಲು, ವಿಶ್ಲೇಷಣೆ ಮತ್ತು ತೀರ್ಮಾನಗಳನ್ನು ತೆಗೆದುಕೊಳ್ಳುವುದರಲ್ಲಿ ಸಂಖ್ಯಾಶಾಸ್ತ್ರ ವಿಷಯವು ಪ್ರಾಮುಖ್ಯತೆ ಹೊಂದಿದೆ ಎಂದು ಅಧ್ಯಕ್ಷ್ಯತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎನ್. ಎಮ್.ಮಕಾಂದಾರ ಅಭಿಪ್ರಾಯಿಸಿದರು.
ಡಾ. ನಾಗರಾಜ್ ಗುದಗನ್ನವರ್ ಸ್ವಾಗತಿಸಿದರು. ಕುಮಾರಿ ಸಕೀನಾ ಕಾರ್ಯಕ್ರಮ ನಿರೂಪಿಸಿದರು. ಡಾ. ಎನ್. ಬಿ. ನಾಲತವಾಡ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ನಿವೃತ್ತಿಯಾಗುತ್ತಿರುವ ಡಾ. ಎಫ್. ಎಚ್.ನದಾಫ್ ಅವರನ್ನು ಸನ್ಮಾನಿಸಲಾಯಿತು.