ಧಾರವಾಡ | ರೈತ ಹೋರಾಟಕ್ಕೆ ಯಾವುದೇ ಪಕ್ಷ ತಲೆಬಾಗಲೇಬೇಕು: ಶಾಸಕ ಎಂ ಆರ್ ಪಾಟೀಲ್

Date:

ರೈತ ಹೋರಾಟಕ್ಕೆ ಯಾವುದೇ ಪಕ್ಷವಾದರೂ ತಲೆಬಾಗಲೇಬೇಕು ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದ್ದಾರೆ.

- Advertisement -

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಬಸವಣ್ಣಜ್ಜನವರ ಮಠ ಸಭಾಭವನದಲ್ಲಿ ಕೃಷಿ ಆಧಾರಿತ ಉದ್ಯಮಿಗಳ ಅಭಿವೃದ್ಧಿ ಸಂಸ್ಥೆಯಿಂದ ಜುಲೈ 31ರಂದು ಹಮ್ಮಿಕೊಂಡಿದ್ದ ರೈತ ಹುತಾತ್ಮ‌ ದಿನಾಚರಣೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರೈತ ಹೋರಾಟ, ಪ್ರತಿಭಟನೆಗೆ ಯಾವುದೇ ರಾಜಕೀಯ ಪಕ್ಷವಾಗಿರಲಿ ತಲೆಬಾಗಲೇಬೇಕು. ರೈತರ ಹೋರಾಟ ನಿರಂತರವಾಗಿರಲಿ. ಕುಂದಗೋಳ ಪಟ್ಟಣದಲ್ಲಿ ತಾಲೂಕು ರೈತ ಭವನ ಕಟ್ಟಲು ಮುಂದಾಗುತ್ತೇನೆ. ಪ್ರತಿಯೊಂದು ಅಧಿವೇಶನದಲ್ಲಿ ನಾನು ರೈತರ ಪರ ಧ್ವನಿಯೆತ್ತಿದ್ದೇನೆ. ಈಗಾಗಲೇ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಂತೆ ತಾಲೂಕಿಗೆ ಬರಪರಿಹಾರ ಕೊಡಿಸಲಾಗುವುದು ಮತ್ತು ಬೆಣ್ಣೆಹಳ್ಳದ ಸಮಸ್ಯೆ ಏನೇ ಇದ್ದರೂ ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದರು.

ಮಾಜಿ ಶಾಸಕ ಎಂ ಎಸ್ ಅಕ್ಕಿ ಮಾತನಾಡಿ, “ಧಾರವಾಡ ನಿರಾವರಿಯಿಂದ ವಂಚಿತವಾದ ಜಿಲ್ಲೆಯಾಗಿದೆ. ನಾವು ಸದಾ ರೈತರ ಹೋರಾಟಕ್ಕೆ ಬೆಂಬಲವಾಗಿದ್ದೇವೆ. ಯಾವುದೇ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕೆಂದರೆ ರೈತ ಹೋರಾಟಗಳೇ ಕಾರಣವಾಗುತ್ತವೆ. ಯಾರೇ ಆದರೂ ರೈತನಿಗೆ ಹೆದರಲೆಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ದಲಿತ ಚಳವಳಿಗೆ 50 ವರ್ಷದ ಸಂಭ್ರಮಕ್ಕೆ ಆಹ್ವಾನ

ಕುಂದಗೋಳ ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ ಮಾತನಾಡಿ, ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ, “ಹುತಾತ್ಮ‌ ರೈತರಿಗೆ ಗೌರವ ನೀಡಬಯಸುವುದಾದರೆ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಸಾಲಮನ್ನಾ ಮಾಡಬೇಕು. ಕಳಸಾ ಬಂಡೂರಿ ಯೋಜನೆ‌ ಜಾರಿ ಮಾಡಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಜಾಗೃತಿ ವಹಿಸಬೇಕು” ಎಂದರು.

ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ಸನ್ಮಾನಗೈದು ಗೌರವಿಸಿದರು. ತಾಲೂಕಿನ ರೈತ ಸಂಘಟಕರು, ಹಸಿರುಸೇನೆ ಸಂಘಟಕರು, ರೈತರು, ರೈತ ಮಹಿಳೆಯರು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...