ಕರ್ನಾಟಕ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ, ಧಾರವಾಡ ಸ್ನಾತಕ ಇತಿಹಾಸ ಹಾಗೂ ಭೌತಶಾಸ್ತ್ರ ವಿಷಯಗಳಿಗೆ, ಘಟಕ ಮಹಾವಿದ್ಯಾಲಯಗಳಿಗೆ 2025-26ನೇ ಸಾಲಿನ ಸ್ನಾತಕ ಕೋರ್ಸ್‌ಗಳಿಗೆ ಮೇಲಿನ ವಿಷಯಗಳ ಕಾರ್ಯಭಾರದ ಅಗತ್ಯತೆಗೆ ಅನುಗುಣವಾಗಿ ಬೋಧನೆ ಮಾಡಲು ಖಾಲಿ ಇರುವ ಪೂರ್ಣಾವಧಿ ಹಾಗೂ ಅಲ್ಪಾವಧಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ಕ.ವಿ.ವಿ. ಅಂರ್ತಜಾಲ: www.kud.ac.in ಮೂಲಕ ಪಡೆಯಬಹುದು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ