ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಧಾರವಾಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಿದ್ದಾರೆ.
ಆಸಕ್ತ ಯುವಕ, ಯುವತಿಯರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಸಬೇಕು.
ಇದನ್ನು ಓದಿದ್ದೀರಾ? ಧಾರವಾಡ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.