ಮಹಿಳಾ ದಿನಾಚರಣೆ ಅಂಗವಾಗಿ 2023-24ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಾಗಿ ಆಸಕ್ತ ಮತ್ತು ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, “ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು 5 ವರ್ಷಗಳಿಂದ ಅವಿರತವಾಗಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಸಾಮಾಜಿಕ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆಸಕ್ತ ಮತ್ತು ಅರ್ಹ ವ್ಯಕ್ತಿ ಹಾಗೂ ಸಂಸ್ಥೆಯವರು 2024 ಜನವರಿ 10ರೊಳಗಾಗಿ ಅರ್ಜಿ ಸಲ್ಲಿಸಬಹುದು” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕರವೇ ಮುಖಂಡರ ಬಂಧನ ಖಂಡಿಸಿ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ಬಾಲ ಭವನ ಕಟ್ಟಡ, ಡಿ.ಸಿ ಕಾಂಪೌಂಡ್, ಧಾರವಾಡ, ದೂರವಾಣಿ ಸಂ: 0836-2447850ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.