ಧಾರವಾಡದಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಕ್ಬಾಲ್, ಅಮೀರ್ ಮತ್ತು ಅಜಮರ್ ಮುಲ್ಲಾ ಈ ಮೂವರು ಸೇರಿ ಬ್ಲೆಡ್ನಿಂದ ಮುಖದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಡಿ ಆರ್ ಪೊಲೀಸ್ ಕಾನ್ಸ್‌ಟೇಬಲ್ ಬಸವರಾಜ ಕಮತರ ಆರೋಪಿಸಿದ್ದಾರೆ.
ಈ ಕುರಿತು ಡಿಸಿಪಿ ಮಹಾನಿಂಗ ನಂದಗಾವಿ ಮಾತನಾಡಿ, ಹಲ್ಲೆಗೊಳಗಾದ ದೂರುದಾರ ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಕಾರಿನಲ್ಲಿ ಇದ್ದರು. ಕಾರನ್ನು ಪಕ್ಕಕ್ಕೆ ಸರಿಸಿ ದಾರಿ ಬಿಡಿ ಎಂಬ ವಿಚಾರಕ್ಕೆ, ಮಾತಿನ ಚಕಮಕಿ ನಡೆದು ಗಲಾಟೆಯಾಗಿದ್ದು, ಈ ವೇಳೆ ದೂರುದಾರನಿಗೆ ಗಾಯವಾಗಿದೆ. ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ ಎಂದರು.
ಈ ವರದಿ ಓದಿದ್ದೀರಾ? ಧಾರವಾಡ | ಕಲಾವಿದರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ
ಈ ಬಗ್ಗೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಕಾನ್ಸ್‌ಟೇಬಲ್ ಬಸವರಾಜ ಕಮತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಿದ್ದಾರೆ.