ಧಾರವಾಡ | ಪಾರ್ಕಿಂಗ್ ವಿಚಾರಕ್ಕೆ ಪೋಲಿಸ್ ಮೇಲೆ ಹಲ್ಲೆ: ಮೂವರ ಬಂಧನ

Date:

ಧಾರವಾಡದಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿ, ಪೊಲೀಸ್ ಕಾನ್ಸ್​​ಟೇಬಲ್​​ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಕ್ಬಾಲ್, ಅಮೀರ್ ಮತ್ತು ಅಜಮರ್ ಮುಲ್ಲಾ ಈ ಮೂವರು ಸೇರಿ ಬ್ಲೆಡ್​ನಿಂದ ಮುಖದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಡಿ ಆರ್ ಪೊಲೀಸ್ ಕಾನ್ಸ್​ಟೇಬಲ್​ ಬಸವರಾಜ ಕಮತರ ಆರೋಪಿಸಿದ್ದಾರೆ.

- Advertisement -

ಈ ಕುರಿತು ಡಿಸಿಪಿ ಮಹಾನಿಂಗ ನಂದಗಾವಿ ಮಾತನಾಡಿ, ಹಲ್ಲೆಗೊಳಗಾದ ದೂರುದಾರ ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಕಾರಿನಲ್ಲಿ ಇದ್ದರು. ಕಾರನ್ನು ಪಕ್ಕಕ್ಕೆ ಸರಿಸಿ ದಾರಿ ಬಿಡಿ ಎಂಬ ವಿಚಾರಕ್ಕೆ, ಮಾತಿನ ಚಕಮಕಿ ನಡೆದು ಗಲಾಟೆಯಾಗಿದ್ದು, ಈ ವೇಳೆ ದೂರುದಾರನಿಗೆ ಗಾಯವಾಗಿದೆ. ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವರದಿ ಓದಿದ್ದೀರಾ? ಧಾರವಾಡ | ಕಲಾವಿದರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ


ಈ ಬಗ್ಗೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಕಾನ್ಸ್‌ಟೇಬಲ್ ಬಸವರಾಜ ಕಮತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...