ಧಾರವಾಡ | ಶಕ್ತಿ ಯೋಜನೆಗೆ ಆಟೋ ಚಾಲಕರ ಸಂಘ ವಿರೋಧ

Date:

ಶಕ್ತಿ ಯೋಜನೆಯ ಅಡಿಯಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರದ ನಡೆಯನ್ನು‌ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘವು ವಿರೋಧಿಸಿದೆ. ಸಂಘದ ಸದಸ್ಯರು ಸೋಮವಾರ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ

- Advertisement -

ಆಟೋ ಚಾಲಕರ ಪರವಾನಗಿ ಪ್ರಮಾಣ ಪತ್ರ ಆಧರಿಸಿ ಅವರಿಗೆ ಮಾಸಿಕ ₹10 ಸಾವಿರ ನೀಡಬೇಕು. ಆಟೋ ರಿಕ್ಷಾ ಚಾಲಕರ ನಿಗಮ ಮಂಡಳಿ ರಚನೆ, ಚಾಲಕರಿಗೆ ಆಟೋ ಕಾಲೊನಿ, ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಉಚಿತ ಶಿಕ್ಷಣ, 60 ವರ್ಷ ದಾಟಿದವರಿಗೆ ಪಿಂಚಣಿ ಸೌಲಭ್ಯ, ಚಾಲಕರು ಅಪಘಾತದಲ್ಲಿ ಮೃತಪಟ್ಟರೆ ₹5 ಲಕ್ಷ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಶಕ್ತಿ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆ ಕಲ್ಪಿಸಿರುವುದರಿಂದ ಆಟೋಗಳಿಗೆ ಬರುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಆಟೋ ಚಾಲಕರ ಕುಟುಂಬ ಬೀದಿಗೆ ಬರಲಿದ್ದು, ಸರ್ಕಾರ ತಕ್ಷಣ ನೆರವಿಗೆ ಧಾವಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಒತ್ತಾಯ

“ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಬಾರದು. ನಗರದಿಂದ 25 ಕಿ.ಮೀ. ವ್ಯಾಪ್ತಿಯ ಹೊರಗಡೆ ಈ ಸೌಲಭ್ಯ ಒದಗಿಸಿದರೆ, ಆಟೋ ಚಾಲಕರು ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...