ಧಾರವಾಡ | ಬಸವಣ್ಣನವರ ವಿಚಾರ, ತತ್ವಗಳು ಭಾರತದ ಸಂವಿಧಾನದಲ್ಲಿ ಕಾಣುತ್ತವೆ: ಸಂತೋಷ್ ಲಾಡ್

Date:

Advertisements

ಬಸವಣ್ಣವರ ವಿಚಾರ, ತತ್ತ್ವಗಳು ಅಂಬೇಡ್ಕರ ರಚಿತ ಸಂವಿಧಾನದಲ್ಲಿ ಕಾಣುತ್ತವೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರಲ್ಲಿ ವಿಚಾರ, ಪ್ರಸ್ತುತತೆಯಲ್ಲಿ ಸಾಮ್ಯತೆ ಇದೆ ಎಂದು‌ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದ ಬಸವಣ್ಣನವರ ವಿಚಾರಧಾರೆಗಳು, ಸಾಮಾಜಿಕ ಸುಧಾರಣೆಗಳು ಅವರ ಅನುಭವ ಮಂಟಪ, ವಚನಗಳ ಮೂಲಕ ಜಾರಿಗೆ ಬಂದರೆ, ಬಸವಣ್ಣನವರ ಮಹಾನ ತತ್ತ್ವಗಳನ್ನು ಅನುಸರಿಸುವಂತೆ ಡಾ.ಬಾಬಾಸಾಹೇಬ ಅಂಬೇಡ್ಕರ ಅವರು ಭಾರತಕ್ಕೆ ಸಂವಿಧಾನ ನೀಡಿದ್ದಾರೆ.

ಸಮಾನತೆ, ಸ್ತ್ರೀ ಸ್ವಾತಂತ್ರ್ಯ, ಲಿಂಗಸಮಾನತೆ ಅಂತಹ ಕ್ರಾಂತಿಕಾರ ವಿಚಾರಗಳನ್ನು ಅವಲೋಕಿಸಿದಾಗ ಇಬ್ಬರೂ ಮಹಾತ್ಮರಲ್ಲಿ ಸಾಮ್ಯತೆ ಕಾಣುತ್ತದೆ. ಬಸವಣ್ಣನವರು ಸಮಾನತೆ, ಲಿಂಗಸಮಾನತೆ, ಮಹಿಳಾ ಸ್ವಾತಂತ್ರ್ಯ ಸೇರಿದಂತೆ ಅನೇಕ ಸಾಮಾಜಿಕ ಸುಧಾರಣೆಗಳನ್ನು ಪ್ರತಿಪಾದಿಸಿದ್ದರು. ಡಾ.ಅಂಬೇಡ್ಕರ್ ಅವರು ಈ ಎಲ್ಲ ಅಂಶಗಳನ್ನು ಸಂವಿಧಾನದಲ್ಲಿ ಸೇರಿಸಿದ್ದಾರೆ. ಆದ್ದರಿಂದ ಇಬ್ಬರ ವಿಚಾರಗಳಲ್ಲೂ ಸಾಮ್ಯತೆ ಇದೆ. ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿ, ಅನುಭವ ಮಂಟಪದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದರು. ಕರ್ನಾಟಕದ ಇಂದಿನ ಪ್ರಗತಿ, ಅಭಿವೃದ್ಧಿಗೆ ಬಸವಣ್ಣನವರ ಕೊಡುಗೆ ಅಧಿಕವಾಗಿದೆ ಎಂದರು.

Advertisements
IMG 20250502 174415

ಕನ್ನಡ ನಾಡಿನ ಇತಿಹಾಸವನ್ನು ನಾವು ಅವಲೋಕಿಸಿದಾಗ ಬಸವ ಪ್ರಣೀತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ನಾಡಿನ ಅಭಿವೃದ್ಧಿಗೆ ಅನ್ನ ಮತ್ತು ಅಕ್ಷರ ದಾಸೋಹ ಎರಡನ್ನೂ ನೀಡಿದೆ. ಈ ಪರಂಪರೆಯನ್ನು ನಾವು ಬೇರೆ ರಾಜ್ಯದಲ್ಲಿ ಕಾಣಲು ಸಾಧ್ಯವಾಗುವದಿಲ್ಲ. ಬಸವಣ್ಣನವರ ಉದಾರ ಚಿಂತನೆಗಳನ್ನು ನಾವು ಅಳವಡಿಸಿಕೊಳ್ಳಬೇಕು. ಅವರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸಬಾರದು. ಬಸವಣ್ಣನವರ ನಡೆ, ನುಡಿಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಸವಣ್ಣನವರ ಬೋಧನೆಗಳನ್ನು ಸಮಕಾಲಿನ ಸಂಗತಿಗಳೊಂದಿಗೆ ಹೋಲಿಕೆ ಮಾಡಿ ವಿಶ್ಲೇಷಿಸಿ, ಅವರ ವಿಚಾರಗಳನ್ನು ಮನೆಮನೆಗೆ ಮುಟ್ಟಿಸುವ ಕೆಲಸವಾಗಬೇಕು ಎಂದು ಹೇಳಿದರು.

ಮಾಜಿ ಶಾಸಕ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮಾತನಾಡಿ, ಬಸವಣ್ಣನವರ ಬದುಕು ನಮಗೆಲ್ಲ ಮಾದರಿ ಆಗಿದೆ. ಅವರ ಜೀವನ ಸಂದೇಶ ನಮಗೆ ದಾರಿ ದೀಪವಾಗಬೇಕು ಎಂದರು. ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ವೀರಣ್ಣ ರಾಜೂರ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಧಾರವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ಡಾ.ಗಿರೀಶ ದೇಸೂರ ಬಸವಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಧಾರವಾಡ ತಹಶಿಲ್ದಾರ ಡಿ.ಎಚ್.ಹೂಗಾರ, ಸಮಾಜದ ಮುಖಂಡ ಸಿದ್ರಾಮಣ್ಣ ನಡಕಟ್ಟಿ, ಎನ್.ಬಿ.ಗೊಲ್ಲನ್ನವರ ಇದ್ದರು.

ಸಂಗೀತ ವಿದ್ವಾಂಸ ಡಾ. ಕೈವಲ್ಯಕುಮಾರ ಗುರುವ ವಚನಗಾಯನ ಕಾರ್ಯಕ್ರಮ ನಡೆಸಿಕೋಟ್ಟರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಪ್ರಮುಖರು, ಬಸವ ಅನುಯಾಯಿಗಳು, ಬಸವಾಭಿಮಾನಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X