ಧಾರವಾಡ | ಬೆಣಚಿ, ಹೊನ್ನಾಪುರ ಪ್ರೌಢಶಾಲೆಗಳಿಗೆ ಬಿಇಒ ಭೇಟಿ; ಸುರಕ್ಷಿತ ಕೊಠಡಿಗೆ ವಿದ್ಯಾರ್ಥಿಗಳ ಸ್ಥಳಾಂತರ

Date:

Advertisements

ಧಾರವಾಡ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಕೊಠಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಕೊಠಡಿಗಳಿಗೆ ಸ್ಥಳಾಂತರಗೊಳಿಸಿದರು.

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಜಿಲ್ಲಾ ಪಂಚಾಯತ್ ಸಿಇಒ ನೀಡಿದ್ದ ನಿರ್ದೇಶನದಂತೆ ವಿದ್ಯಾರ್ಥಿಗಳ ಸುರಕ್ಷತೆಗೆ ಗಮನಹರಿಸದೆ ಮತ್ತು ಕಾಲಮಿತಿಯಲ್ಲಿ ಶಾಲಾ ಕೊಠಡಿಗಳ ದುರಸ್ತಿಗೊಳಿಸದ ಹಿನ್ನಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿಯವರೇ ಇಂದು ಬೆಳಿಗ್ಗೆ ಭೇಟಿ ನೀಡಿದರು.

ಕೊಠಡಿ ದುರಸ್ತಿ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೇರೆಡೆ ಪಾಠ ಮಾಡಲಾಗುತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರು ನೀಡಿದ್ದರು. ಬಳಿಕ ಜಿಲ್ಲಾಧಿಕಾರಿ ದಿವ್ಯ ಪ್ರಭು ನಿರ್ದೇಶನದಂತೆ ಬಿಇಒ ಅವರು ಹೊನ್ನಾಪುರ ಅನುದಾನಿತ ಪ್ರೌಢಶಾಲೆಗೆ ಭೇಟಿ ನೀಡಿ, ಅವರೇ ಮುಂದೆ ನಿಂತು ರಿಪೇರಿ ಆಗಿರುವ ಸುಸಜ್ಜಿತ ಕೊಠಡಿಗೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ, ಅಲ್ಲಿಯೇ ಮಕ್ಕಳಿಗೆ ಪಾಠ ಮಾಡುವಂತೆ ಮಾಡಿದರು.

Advertisements
ಧಾರವಾಡದ ಬೆಣಚಿ ಪ್ರೌಢಶಾಲೆ

“ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಅನಾನುಕೂಲ ಮತ್ತು ಅಸುರಕ್ಷತೆ ಉಂಟಾದರೆ ಶಾಲೆಯ ಮೇಲೆ ಸೂಕ್ತ ಕ್ರಮಕ್ಕೆ ಶಿಪಾರಸು ಮಾಡಲಾಗುತ್ತದೆ. ಹಿಂದಿನಿಂದ ಸಂಸ್ಥೆಯವರು ಶಾಲೆಯನ್ನು ಉತ್ತಮವಾಗಿ ನಿರ್ವಹಿಸಿದ್ದರೂ, ಉತ್ತಮ ಗುಣಮಟ್ಟದ ಮೂಲಸೌಕರ್ಯ ಕಲ್ಪಿಸುವಲ್ಲಿ ಕೊರತೆ ಉಂಟಾಗುತ್ತಿದೆ. ಈ ಕುರಿತು ತುರ್ತು ಕ್ರಮವಹಿಸಬೇಕು” ಎಂದು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಿಗೆ ಸೂಚಿಸಿದರು.

ಬೆಣಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ: ದುರಸ್ತಿ ಪೂರ್ಣಗೊಳ್ಳದ ಕೊಠಡಿಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಿಇಒ ಸದಲಗಿ ಅವರು ಬೆಣಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಬೆಳಿಗ್ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದರು.

ಧಾರವಾಡದ ಬೆಣಚಿ ಪ್ರೌಢಶಾಲೆ 2

“ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿ, ಮುಂದಿನ ಎರಡು ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಬಳಕೆಗೆ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದೈಹಿಕ ಆರೋಗ್ಯಕ್ಕೆ ಯೋಗ ಪೂರಕ : ರೇಷ್ಮಾ ಕೌರ್

“ಕಟ್ಟಡ ಕಾಮಗಾರಿ ವಿಳಂಬ, ಅಪೂರ್ಣವಾದ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಆದೇಶದ ಮೇರೆಗೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಸುರೇಶ ಹಾಗೂ ಬೆಣಚಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ ಹಾಗೂ ಕೆಆರ್‌ಐಡಿಎಲ್ ಎಇಇ ಅನ್ನಪೂರ್ಣ ಮತ್ತು ಶಿಕ್ಷಣ ಸಂಯೋಜಕ ಬಸವರಾಜ ಛಬ್ಬಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X