ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು 6 ಕೋಟಿ ವೆಚ್ಚದಲ್ಲಿ ಕೈಗೊಳ್ಳಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿ, ಮಾತನಾಡಿ, ಕಾಮಗಾರಿಯ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕೆರೆಯ ಕಾಮಗಾರಿಯನ್ನು 9 ತಿಂಗಳ ಅವಧಿಯೊಳಗೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದು ಸರ್ಕಾರದ ಕೆಲಸವಾಗಿದೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಇದಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯಕ. ಸುಮಾರು 5 ಸಾವಿರ ಎಕರೆಗೆ ಕೆರೆಯ ನೀರು ಉಪಯೋಗವಾಗಲಿದೆ. ರೈತರಿಗೆ ಬರಗಾಲದ ಸಂದರ್ಭದಲ್ಲಿ ಬೆಳೆ ಬೆಳೆಯಲು ಕೆರೆ ನೀರು ಉಪಯೋಗಿಸಲು ಸಹಾಯಕವಾಗಲಿದೆ. ಮುಂದಿನ ದಿನಗಳಲ್ಲಿ ರೈತರಿಗೆ ನೀರು ಸರಬರಾಜು ಆಗುತ್ತದೆ ಎಂದರು.
ಈ ವರದಿ ಓದಿದ್ದೀರಾ? ಧಾರವಾಡ | ಗೋವಾ ಕಡೆಗೆ ಹೊರಟಿದ್ದ ಗೂಡ್ಸ್ ಲಾರಿಗೆ ಆಕಸ್ಮಿಕ ಬೆಂಕಿ
ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಕೆರೆಯ ಸುತ್ತ ಮುತ್ತಲಿನ ಪ್ರದೇಶವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಳ್ನಾವರ ತಾಲೂಕು ತಹಶೀಲ್ದಾರ ಬಸವರಾಜ ಬೆಣ್ಣಿಶಿರೋರ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಹುಲಿಕೇರಿ ಗ್ರಾಮಸ್ಥರು ಭಾಗವಹಿಸಿದ್ದರು.